![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2024, 2:35 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2024-25ನೇ ಸಾಲಿನ ಮುಂಗಡ ಪತ್ರದಲ್ಲಿ ಅನ್ನ ಸುವಿಧಾ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯ ಈಡೇರಿಸಲು ನೆರವಾಗಲಿದೆ ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:INDvsENG; 90 ವರ್ಷಗಳ ಭಾರತೀಯ ಇತಿಹಾಸದಲ್ಲಿ ದಾಖಲೆ ಬರೆದ ಧ್ರುವ್ ಜುರೆಲ್
ಅನ್ನ ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಕಾರ್ಮಿಕ ವಲಯಕ್ಕೆ ಸಿಕ್ಕಿದ್ದೇನು?
ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (Gig workers) ಬದುಕಿನ ಭದ್ರತೆಗಾಗಿ Platform Based Gig workers Fund And welfare Free Bill ಎಂಬ ಹೊಸ ವಿಧೇಯಕ ಜಾರಿಗೆ ತರಲಿದ್ದು, ಈ ಮೂಲಕ ಅರ್ಹ ಆನ್ ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ ರೂಪಿಸುವುದಾಗಿ ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ವಾಣಿಜ್ಯ ಸಾರಿಗೆ ವಾಹನಗಳ ನೋಂದಣಿಯ ಮೇಲೆ ಸುಂಕವನ್ನು ವಿಧಿಸುವ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ರೂಪಿಸಲಾಗುವುದು. ಅಲ್ಲದೇ ವಾಹನ ಚಾಲಕರಿಗೆ ನಿಲ್ದಾಣ/ಹೆದ್ದಾರಿ ಬದಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಂಗಡ ಪತ್ರದಲ್ಲಿ ತಿಳಿಸಲಾಗಿದೆ.
ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, point Of Care Moblie Digital Diagnostic Kiosk, Mobile Health Unit, 40 ವರ್ಷ ಮೇಲ್ಪಟ್ಟು ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ Tetanus ಮತ್ತು Hepatitis ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಅನುಷ್ಠಾನಗೊಳಿಸುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.