Budget; ಬೆಂಗಳೂರು ಸಮೀಪ ಸಂಶೋಧನಾ ನಗರ

2000 ಎಕರೆ ಪ್ರದೇಶದಲ್ಲಿ ಬೃಹತ್‌ ನಗರ ; 40000 ಕೋಟಿ ರೂಪಾಯಿ ಬಂಡವಾಳ ಹೂಡಿಕೆ

Team Udayavani, Feb 16, 2024, 11:20 PM IST

Budget; ಬೆಂಗಳೂರು ಸಮೀಪ ಸಂಶೋಧನಾ ನಗರ

ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಜ್ಞಾನ ಆರೋಗ್ಯ ಕಾಳಜಿ, ನಾವೀನ್ಯತೆ ಮತ್ತು ಸಂಶೋಧನಾ ನಗರ (ಕೆಎಚ್‌ಐಆರ್‌ಖೀರ್‌) ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತನೆ ನಡೆಸಿದೆ.

ಕೆಎಚ್‌ಐಆರ್‌ನಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು ಸುಮಾರು 80,000 ಜನರಿಗೆ ಉದ್ಯೋಗ ದೊರೆ ಯುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಹೇಳಿದ್ದಾರೆ.

ಗ್ರಾಮಾಂತರ ಪ್ರದೇಶಗಳಿಗೆ ಎಂಎಸ್‌ಐಎಲ್ ವತಿಯಿಂದ ಚಿಟ್‌ಫಂಡ್ , ಕೈಗಾರಿಕಾ ವಸಾಹತು ಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ  ಪ್ರಮಾಣದ ಕೈಗಾರಿಕೆಗಳ ನಿಗಮದ ಮೂಲಕ ಮೇಲ್ದರ್ಜೆಗೇರಿಸವುದು, ಯಶವಂತ ಪುರದಲ್ಲಿ ಕೆ.ಎಸ್‌.ಡಿ.ಎಲ್‌ ವತಿಯಿಂದ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಚೇರಿ ಸಂಕೀರ್ಣ ನಿರ್ಮಿಸುವ ಘೋಷಣೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾ ರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು- ಮುಂಬಯಿ ಎಕನಾಮಿಕ್‌ ಕಾರಿಡಾರ್‌ ಯೋಜನೆಯಡಿ ಧಾರವಾಡ ಸಮೀಪ ಸುಮಾರು  6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ನೋಡ್‌ ಅಭಿವೃದ್ಧಿಪಡಿಸುವ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡುವ ತೀರ್ಮಾನವನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಐಪಿಒಗೆ ಸಹಾಯಧನ: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್‌ ಎಕ್ಸ್‌ಚೆಂಜ್‌ಗಳಲ್ಲಿ ಐಪಿಓ (ಇನ್ಷಿಯಲ್‌ ಪಬ್ಲಿಕ್‌ ಆಫ‌ರ್‌) ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂ. ಗಳಿಗೆ ಒಳಪಟ್ಟು ಶೇ.50 ರಷ್ಟು ಸಹಾಯಧನ ನೀಡುವ ವಿನೂತನ ಕ್ರಮವನ್ನು ಪ್ರಕಟಿಸಲಾಗಿದೆ.

ಎಲ್ಲಾ ಉಪ ಖನಿಜಗಳ ಅನಧಿಕೃತ ಗಣಿಗಾರಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಪೂರ್ಣ ಖನಿಜ ಬಳಕೆ ಪ್ರಮಾಣವನ್ನು ಡ್ರೋನ್‌ ಸರ್ವೆ ಮೂಲಕ ವೈಜ್ಞಾನಿಕವಾಗಿ ಅಂದಾಜಿಸುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸುವ ಪ್ರಯತ್ನ ನಡೆಸಲಾಗುವುದು, ಎಲ್ಲಾ ಗೊಂದಲಗಳನ್ನು ನಿವಾರಿಸಿ ಹೊಸ ಮರಳು ನೀತಿ-2020ಯನ್ನು ಜಾರಿ ಗೊಳಿಸಿ ಸುಲಭವಾಗಿ ಹಾಗೂ ಯೋಗ್ಯ ದರದಲ್ಲಿ ಮರಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಮೈ ಷುಗರ್‌ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ
ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ ಆಸ್ತಿಗಳಿಂದ ಹಣ ಸಂಗ್ರಹದ ಮೂಲಕ ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್ಟ್ಟೈಲ್‌ ಪಾರ್ಕ್‌ ಸ್ಥಾಪನೆ. ಮೂಲ ಸೌಕರ್ಯ ಕ್ಕಾಗಿ 50 ಕೋಟಿ ರೂ.ಗಳ ಅನುದಾನ
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾಕ್‌ಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.