State Govt; ರಾಜ್ಯದ ಎಲ್ಲ ಕೋರ್ಟ್‌ಗಳಲ್ಲಿ ಕಲಾಪಗಳ ನೇರ ಪ್ರಸಾರ
Team Udayavani, Feb 16, 2024, 11:35 PM IST
ಬೆಂಗಳೂರು: ಹೈಕೋರ್ಟ್‌ಗಷ್ಟೇ ಸಿಮೀತವಾಗಿದ್ದ ನ್ಯಾಯಾಲಯ ಕಲಾಪಗಳ ನೇರ ಪ್ರಸಾರ ಮಾಡುವ ಯೋಜನೆ ಇದೀಗ ರಾಜ್ಯದ ಎಲ್ಲಾ ನ್ಯಾಯಾಲಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದೆ.
ರಾಜ್ಯದ ಎಲ್ಲ ನ್ಯಾಯಾಲಯಗಳ ಕಲಾಪಗಳ ನೇರ ಪ್ರಸಾರ ಮಾಡಲು ಮತ್ತು ನ್ಯಾಯಾಲಯಗಳ ಆಡಳಿತ ವ್ಯವಸ್ಥೆ ಆಧುನೀಕರಿಸಲು 94 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 180 ಕೋಟಿ ರೂ. ಒದಗಿಸಲಿದೆ. ಇನ್ನು ರಾಜ್ಯದ ವಿವಿಧ ಕೋರ್ಟ್‌ಗಳ ಕಟ್ಟಡಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಗಳನ್ನು ಅಭಿವೃದ್ಧಿಪಡಿಸ ಲಾಗುತ್ತಿದ್ದು, 2024-25ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 175 ಕೋಟಿ ರೂ. ಅನುದಾನ ಒದಗಿಸಲಾಗುವುದು.
ವಿರಾಜಪೇಟೆಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ಹಿಂದುಳಿದ ತಾಲೂಕುಗಳಿಗೆ
ಹೊಸ ಅಭಿವೃದ್ಧಿ ಸೂಚ್ಯಂಕ
ಬೆಂಗಳೂರು: ಡಾ.ಎಂ.ನಂಜುಂಡಪ್ಪ ವರದಿಯ ಆಧಾರದಲ್ಲಿ ರೂಪಿಸಿರುವ ಯೋಜನೆಗಳಿಂದ ಆಗಿರುವ ಬದಲಾವಣೆ ಮತ್ತು ಪರಿಣಾಮಗಳ ಅಧ್ಯ ಯನಕ್ಕೆ ಉನ್ನತಾಧಿಕಾರಿ ಸಮಿತಿ ರಚಿಸುವ ಹಾಗೆಯೇ ಆ ಸಮಿತಿ ನೀಡುವ ವರದಿಯ ಆಧಾರದಲ್ಲಿ ಹೊಸ ಅಭಿವೃದ್ಧಿ ಸೂಚ್ಯಂಕ ವನ್ನು ತಯಾರಿಸುವ ತೀರ್ಮಾ ನವನ್ನು ಸರ್ಕಾರ ಪ್ರಕಟಿಸಿದೆ. ನಂಜುಂಡಪ್ಪ ವರದಿಯನ್ನು 2002ರಲ್ಲಿ ಸಲ್ಲಿಸಲಾಗಿದ್ದು, ಕಳೆದ 22 ವರ್ಷಗಳಲ್ಲಿ ಈ ವರದಿಯ ಆಧಾರದ ಮೇಲೆ ಹಿಂದುಳಿದ ಪ್ರದೇಶಗಳಲ್ಲಿ ಅಸಮ ತೋಲನೆ ನಿವಾರಿಸಲು ಬಹಳಷ್ಟು ಯೋಜನೆ ಗಳನ್ನು ಮತ್ತು ಬಂಡವಾಳ ಹೂಡಿಕೆ ಮಾಡಲಾಗಿದೆ. ಇದರಿಂದ ಆಗಿರುವ ಬದ ಲಾ ವಣೆಗಳು ಮತ್ತು ಪರಿಣಾಮಗಳನ್ನು ಈ ಸಮಿತಿ ಅಧ್ಯಯನ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.