Police Constable: ಮನೆಯಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್ಸ್ಟೇಬಲ್… ಕಾರಣ ನಿಗೂಢ
Team Udayavani, Feb 17, 2024, 9:35 AM IST
ರಾಮನಗರ : ಮಹಿಳಾ ಕಾನ್ಸ್ಟೇಬಲ್ ಓರ್ವರು ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 27) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೇಬಲ್.
ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.
ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಇದನ್ನೂ ಓದಿ: Trust Vote: ಇಂದು ಸಿಎಂ ಕೇಜ್ರಿವಾಲ್ ಗೆ ದೆಹಲಿ ಅಸೆಂಬ್ಲಿಯಲ್ಲಿ ವಿಶ್ವಾಸ ಮತ ಪರೀಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.