Hunsur: ವಿವಿಧ ಬೇಡಿಕೆ ಈಡೇರಿಕೆಗಾಗಿ ಸಂಘಟನೆಗಳ ಪ್ರತಿಭಟನಾ ಧರಣಿ


Team Udayavani, Feb 17, 2024, 2:39 PM IST

8-hunsur

ಹುಣಸೂರು: ದೇಶದ ರಾಜಧಾನಿ ದೆಹಲಿಗೆ ಹೊರಟ ರೈತರ ಮೇಲೆ ನಡೆದ ಅಮಾನುಷ ದೌರ್ಜನ್ಯ ಖಂಡಿಸಿ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಹಾಗೂ ಅಂಗನವಾಡಿ ಕಾರ್ಯಕರ್ತರ ಹಾಗೂ ರೈತ ಕೂಲಿಕಾರರ ಮತ್ತು ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದರು.

ನಗರದ ಸಂವಿಧಾನ ಸರ್ಕಲ್‌ನಲ್ಲಿ ದಲಿತ ಹಕ್ಕುಗಳ ಸಮಿತಿ, ರಾಜ್ಯ ರೈತ ಸಂಘ, ನಗರ ಕಾರ್ಮಿಕರ ಸಂಘ, ಡಿಎಚ್‌ಎಸ್, ಡಿಎಸ್‌ಎಸ್ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನಾ  ಧರಣಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ, ಕಾರ್ಮಿಕ, ಕೂಲಿಕಾರರ ವಿರೋಧಿ ನೀತಿಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಲು ಕ್ರಮವಹಿಸಬೇಕು ಎಂದ ಪ್ರತಿಭಟನಾಕಾರರು ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಘೋಷಣೆಗೆ ಕೂಗಿ ಗಮನ ಸೆಳೆದರು.

ಸಿಐಟಿಯು ತಾಲೂಕು ಸಂಚಾಲಕ ವಿ.ಬಸವರಾಜಕಲ್ಕುಣಿಕೆ ಮಾತನಾಡಿ, ದೇಶದಲ್ಲಿ ರೈತ ಕಾರ್ಮಿಕರ ಪರವಾಗಿ ನಿಲ್ಲಬೇಕಾದ ಸರಕಾರಗಳು ವಿರೋಧಿ ಧೋರಣೆಗಳನ್ನು ಅನುಸರಿಸಿ ಅವರ ಬದುಕನ್ನು ಕಿತ್ತುಕೊಳ್ಳಲು ಹೊರಟಿವೆ ಎಂದ ಅವರು, ರೈತರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ದೇಶದ ರಾಜಧಾನಿ ದೆಹಲಿಗೆ ಹೊರಟ ರೈತರ ಮೇಲೆ ಕೇಂದ್ರ ಸರಕಾರ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಇದು ಸಾಧ್ಯವಾಗದ ಮಾತು. ಕೂಡಲೇ ರೈತರೊಂದಿಗೆ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ರೈತರ ಬೇಡಿಕೆಗಳನ್ನು ಈಡೇರಿಸುವ ಬದಲು ಸರಕಾರ ಅವರ ಹೋರಾಟವನ್ನು ಹತ್ತಿಕ್ಕಲು ಹೊರಟಿರುವುದು ರೈತ ವಿರೋಧಿ ಸರಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ತಾಲೂಕು ಕಾರ್ಯದರ್ಶಿ ಕಾಮ್ರೆಡ್ ಪುಷ್ಪ ಮಾತನಾಡಿ, ದೇಶದಲ್ಲಿ ದುಡಿಯುವ ಜನರಿಗೆ ಇಂದು ಕನಿಷ್ಠ ವೇತನ ಇಲ್ಲದೆ ದುಡಿಯುವ ಪರಿಸ್ಥಿತಿಯನ್ನು ಆಳುವ ಸರಕಾರಗಳೇ ನಿರ್ಮಾಣ ಮಾಡುತ್ತವೆ. ಸರಕಾರಗಳು ಕೂಡಲೇ ದುಡಿಯುವ ವರ್ಗಕ್ಕೆ ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿದ ಅವರು ರೈತ ಕಾರ್ಮಿಕರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಡಿ.ಎಚ್.ಎಸ್ ಜಿಲ್ಲಾ ಸಂಚಾಲಕ ಬೆಳ್ತೂರು ವೆಂಕಟೇಶ್, ಸಿಐಟಿಯು ತಾಲೂಕು ಸಹ ಸಂಚಾಲಕ ಶಿವರಾಮು, ತಾಲೂಕು ಅಂಗನವಾಡಿ ನೌಕರ ಸಂಘದ ತಾಲೂಕು ಅಧ್ಯಕ್ಷ ಮಂಗಳಗೌರಮ್ಮ, ಡಿಎಚ್‌ಎಸ್‌ನ ತಾ.ಅಧ್ಯಕ್ಷ ತಮ್ಮಡಹಳ್ಳಿ ಮಹದೇವು, ರೈತ ಸಂಘದ ತಾಲೂಕು ಅಧ್ಯಕ್ಷ ಬೆಂಕಿಪುರಚಿಕ್ಕಣ್ಣ, ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ದಸಂಸ ನಗರ ಸಂಚಾಲಕ ರಾಜು ಚಿಕ್ಕ ಹುಣಸೂರು ಮಾತನಾಡಿದರು.

ಖಜಾಂಚಿ ಕಲಾವತಿ, ಉಪಾಧ್ಯಕ್ಷೆ ನಾಗಮ್ಮ, ನಗರ ಕಾರ್ಮಿಕ ಸಂಘದ ಅಧ್ಯಕ್ಷ ಚಂದ್ರೇಗೌಡ, ಗೌರವಾಧ್ಯಕ್ಷ ಎಚ್.ಎಮ್.ಶ್ರೀಧರ್, ಮುಖಂಡರಾದ ಪ್ರೇಮ, ರೇಖಾ, ಮಣಿ, ರಂಜಿತಾ, ಪದ್ಮಭಾಯಿ, ಹೊನ್ನಮ್ಮ, ಸರಸ್ವತಿ, ಜಾನಕಿ, ಶಾರದಾ, ಅನ್ನಪೂರ್ಣ, ನಗರ ಕಾರ್ಮಿಕರ ಸಂಘದ ಮಹದೇವು, ಲಕ್ಷ್ಮಣ, ನಾಗನಹಳ್ಳಿ ಚೆಲುವರಾಜು, ಕೆಂಪರಾಮಯ್ಯ, ಸಾಲಿಡಾರಟಿ ಯೂತ್ ಮೂಮಂಟ್‌ನ ಮುದಾಶೀರ್,  ಪಬ್ಲಿಕ್ ಪೀಸ್ ಕಮಿಟಿಯ ಅಜಿಬುಲ್ಲ, ರಿಜ್ವಾನ್, ಬಿಸಿಯೂಟ ಸಂಘದ ಮಂಜುಳ ಹೇಮಾ ಸೇರಿದಂತೆ 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.