Rabkavi Banhatti: ಸಿಲಿಂಡರ್ ಪೈಪ್ ಸೋರಿಕೆ: ಹೋಟೆಲ್ ಕಾರ್ಮಿಕನಿಗೆ ಗಾಯ
Team Udayavani, Feb 17, 2024, 6:37 PM IST
ರಬಕವಿ ಬನಹಟ್ಟಿ: ಇಲ್ಲಿನ ಬಸ್ ನಿಲ್ದಾಣದ ಮುಂಭಾಗದಲ್ಲಿಯ ಹೋಟೆಲ್ ನಲ್ಲಿ ಸಿಲಿಂಡರ್ ಗ್ಯಾಸ್ ಪೂರೈಕೆ ಮಾಡುತ್ತಿದ್ದ ಪೈಪ್ ಸೋರಿಕೆಯಿಂದಾಗಿ ಬೆಂಕಿ ಹತ್ತಿದ್ದು ಇದರಿಂದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ 1 ರ ಸುಮಾರಿಗೆ ನಡೆದಿದೆ.
ಗ್ಯಾಸ್ ಪೂರೈಕೆ ಮಾಡುತ್ತಿದ್ದ ಪೈಪ್ ಸೋರಿಕೆಯಾಗುತ್ತಿದೆ. ಹೋಟೆಲ್ ಸಿಬ್ಬಂದಿ ಧೂಮಪಾನ ಮಾಡಲೆಂದು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಸ್ಥಳೀಯ ಪೊಲೀಸ್ ರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಗಾಯಗೊಂಡಿರುವ ಹೋಟೆಲ್ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಅನಾಹುತ ಸಂಭಸುವುದಕ್ಕಿಂತ ಮುಂಚೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಅನಿಲ ಸೋರಿಕೆಯ ಸಂದರ್ಭದಲ್ಲಿ ಹೋಟೆಲ್ ನಲ್ಲಿ ಸದ್ದು ಉಂಟಾಗಿದ್ದುದರಿಂದ ಹೋಟೆಲ್ ನಲ್ಲಿದ್ದ ಕಾರ್ಮಿಕರು ಮತ್ತು ಗ್ರಾಹಕರು ಹೊರಗೆ ಓಡಿ ಬಂದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.