ಫೆ.24, 25ಕ್ಕೆ ರಾಷ್ಟ್ರೀಯ ಏಕತಾ ಸಮಾವೇಶ: ಸಿಎಂ
Team Udayavani, Feb 17, 2024, 10:17 PM IST
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜ.26ರಿಂದ ಫೆ.23ರ ವರೆಗೆ ಸಂವಿಧಾನ ಜಾಥಾ ನಡೆಸುತ್ತಿದ್ದು, ಫೆ.24 ಮತ್ತು 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದಿದ್ದು, ಸಂವಿಧಾನ ನಮಗೇನು ಕೊಟ್ಟಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಡಾ| ಬಿ.ಆರ್. ಅಂಬೇಡ್ಕರ್ ಅವರ ಮೂರು ಮಂತ್ರಗಳನ್ನು ನೆನಪಿಟ್ಟುಕೊಳ್ಳಬೇಕು. ಅದರಲ್ಲಿ ನಮಗೆ ಹಕ್ಕುಗಳನ್ನು ಕೊಟ್ಟಿರುವಂತೆಯೇ ಕರ್ತವ್ಯಗಳನ್ನೂ ಕೊಟ್ಟಿದೆ. ಇದು ಎಲ್ಲರಿಗೂ ಗೊತ್ತಾಗಬೇಕು ಎಂದರು.
ಜನಜಾಗೃತಿಗಾಗಿ ಸಂವಿಧಾನ ಜಾಥಾ
ಈ ಎಲ್ಲ ಕಾರಣಗಳಿಂದಲೇ ಗಣರಾಜ್ಯೋತ್ಸವ ದಿನವಾದ ಜ.26ರಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಂವಿಧಾನ ಜಾಥಾ ಯಶಸ್ವಿಯಾಗಿ ನಡೆಯುತ್ತಿದ್ದು, 2024-25ನೇ ಸಾಲಿನ ಬಜೆಟ್ ಪುಸ್ತಕದ ಮುಖಪುಟದಲ್ಲಿಯೂ ಸಂವಿಧಾನದ ಪೀಠಿಕೆಯನ್ನು ಪ್ರಕಟಿಸಿದ್ದೇವೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ಜಾಥಾವು ಫೆ.23ರಂದು ಕೊನೆಗೊಳ್ಳಲಿದೆ. ಇದರ ಅಂಗವಾಗಿ ಎರಡು ದಿನಗಳ ಕಾಲ ರಾಷ್ಟ್ರೀಯ ಮಟ್ಟದ ಏಕತಾ ಸಮಾವೇಶವನ್ನೂ ನಡೆಸಲಾಗುತ್ತಿದೆ.
ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ ಸಹಿತ ಇಲಾಖೆಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.