ಹೊಟ್ಟೆಯಲ್ಲಿತ್ತು 9.20 ಕೋಟಿ ರೂ. ಮೌಲ್ಯದ 91 ಕೊಕೇನ್ ಕ್ಯಾಪ್ಸುಲ್!
Team Udayavani, Feb 18, 2024, 7:30 AM IST
ಬೆಂಗಳೂರು: ಹೊಟ್ಟೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಕೊಕೇನ್ ಕ್ಯಾಪ್ಸುಲ್ ಗಳನ್ನು ಸಾಗಿಸುತ್ತಿದ್ದ 40 ವರ್ಷದ ಬ್ರೆಜಿಲ್ ಪ್ರಜೆಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ಆತನ ಹೊಟ್ಟೆಯಲ್ಲಿದ್ದ 9.20 ಕೋ. ರೂ. ಮೌಲ್ಯದ 91 ಕೊಕೇನ್ ಕ್ಯಾಪ್ಸುಲ್ ಗಳನ್ನು ಹೊರತೆಗೆಯಲಾಗಿದೆ.
ಫೆ.9ರಂದು ಮುಂಜಾನೆ ಬ್ರೆಜಿಲ್ನಿಂದ ದುಬಾೖ ಮಾರ್ಗವಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿದ್ದ ಈತನನ್ನು ಅನುಮಾನದಲ್ಲಿ ವಶಕ್ಕೆ ಪಡೆಯಲಾಯಿತು. ಆತನ ದೇಹದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ತುಂಬಾ ಆಯಾಸ ಗೊಂಡಿದ್ದ. ಬಳಿಕ ಆಸ್ಪತ್ರೆಗೆ ಕರೆದೊಯ್ದು ಪರಿಶೀಲಿಸಿದಾಗ ಕ್ಯಾಪ್ಸುಲ್ ಪತ್ತೆಯಾಗಿತ್ತು. ಅದನ್ನು ಹೊರ ತೆಗೆಯಲು ನಾಲ್ಕೈದು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಳ್ಳಲಾಗಿತ್ತು. ಎರಡು ದಿನಗಳ ಹಿಂದೆ ಆತನ ದೇಹದಲ್ಲಿದ್ದ 920 ಗ್ರಾಂ ತೂಕದ 91 ಕೊಕೇನ್ ಕ್ಯಾಪ್ಸುಲ್ ಗಳನ್ನು ಹೊರ ತೆಗೆಯಲಾಗಿದೆ. ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.