Govt; 30 ತಾಲೂಕಿಗೆ ಇನ್ನೂ ಇಲ್ಲ ಮಿನಿ ವಿಧಾನಸೌಧ ಭಾಗ್ಯ

63 ತಾಲೂಕುಗಳ ಪೈಕಿ ನಿರ್ಮಾಣ ಪೂರ್ಣಗೊಂಡಿದ್ದು 4 ಕಡೆ ಮಾತ್ರ

Team Udayavani, Feb 19, 2024, 7:15 AM IST

Govt; 30 ತಾಲೂಕಿಗೆ ಇನ್ನೂ ಇಲ್ಲ ಮಿನಿ ವಿಧಾನಸೌಧ ಭಾಗ್ಯ

ಬೆಂಗಳೂರು:”ನಮ್ಮ ತಾಲೂಕುಗಳಿಗೆ ಶಾಶ್ವತ ಸ್ವಂತ ಆಡಳಿತ ಕಚೇರಿ ಮಿನಿ ವಿಧಾನಸೌಧ ಸಿಗೋದು ಯಾವಾಗ? ಬಾಡಿಗೆ ಕಟ್ಟಡ, ಇನ್ಯಾವುದೋ ಇಲಾಖೆ ಕಚೇರಿಯ ದಾಕ್ಷಿಣ್ಯ ಇನ್ನೆಷ್ಟು ದಿನ?’ ಇದು ಹೊಸ ತಾಲೂಕುಗಳ ಜನರ ಕೊರಗು! ಜನರ ಹೋರಾಟಗಳು, ಜನಪ್ರತಿನಿಧಿಗಳ ಬೇಡಿಕೆ ಇವುಗಳ ಜೊತೆಗೆ ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರಗಳು ಹೊಸ ತಾಲೂಕುಗಳನ್ನು ಘೋಷಣೆ ಮಾಡಿವೆ. ಆದರೆ, ಘೋಷಣೆ ಮಾಡಿದ ವೇಗಕ್ಕೆ ತಕ್ಕಂತೆ ಅವುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ.

ಪ್ರಮುಖವಾಗಿ ಹೊಸ ತಾಲೂಕುಗಳಿಗೆ ಮುಕುಟಪ್ರಾಯವಾದ ಸ್ಥಳೀಯ ಆಡಳಿತ ಕೇಂದ್ರ ಮಿನಿ ವಿಧಾನಸೌಧ ಅನೇಕ ಕಡೆ ಇನ್ನೂ ತಲೆಎತ್ತಿಲ್ಲ. ಬಹಳಷ್ಟು ಕಡೆ ಯಾವುದೋ ಹಳೆಯ ಕಟ್ಟಡಗಳಲ್ಲಿ, ಇನ್ಯಾವುದೋ ಇಲಾಖೆಯ ಕಚೇರಿಗಳಲ್ಲಿ ಒಂದಿಷ್ಟು ಜಾಗ ಪಡೆದು, ಇನ್ನೂ ಕೆಲವೆಡೆ ಬಾಡಿಗೆ ಕಟ್ಟಡಗಳಲ್ಲಿ ತಾಲೂಕು ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ತಾಲೂಕು ಆಗಿದೆ, ಆದರೆ ಅದಕ್ಕೆ ಆಡಳಿತದ ಗತ್ತು ಇನ್ನೂ ಸಿಕ್ಕಿಲ್ಲ.

ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ, 2017ರಿಂದ ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 64 ಹೊಸ ತಾಲೂಕುಗಳ ಘೋಷಣೆ ಆಗಿದ್ದು, ಅವುಗಳ ಪೈಕಿ 63 ತಾಲೂಕುಗಳು ಅಸ್ತಿತ್ವಕ್ಕೆ ಬಂದಿವೆ. ಇದರಲ್ಲಿ ಮಿನಿ ವಿಧಾನಸೌಧ (ತಾಲೂಕು ಆಡಳಿತಸೌಧ) ಪೂರ್ಣ ಆಗಿದ್ದು ನಾಲ್ಕು ಕಡೆ ಮಾತ್ರ. 10 ತಾಲೂಕುಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. 11 ಹೊಸ ತಾಲೂಕುಗಳಲ್ಲಿ ಹೊಸ ಮಿನಿ ವಿಧಾನಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಅದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಕ್ರಿಯೆ ಇನ್ನೂ ಪರಿಶೀಲನೆಯಲ್ಲಿದೆ. ಇನ್ನುಳಿದ 38 ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಜಾಗ ಗುರುತಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ. ಅಲ್ಲಿಂದ ಪ್ರಸ್ತಾವನೆ ಬಂದ ಮೇಲೆ ಪರಿಶೀಲಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ.

2013ರಲ್ಲಿ ಮೊದಲ ಬಾರಿ ಘೋಷಣೆ:
ದೊಡ್ಡ ಸಂಖ್ಯೆಯಲ್ಲಿ ಹೊಸ ತಾಲೂಕುಗಳ ಘೋಷಣೆ ಆಗಿದ್ದು, 2013ರಲ್ಲಿ. ಅಂದು ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್‌ ಅವರು ಬಜೆಟ್‌ನಲ್ಲಿ 43 ಹೊಸ ತಾಲೂಕುಗಳನ್ನು ಘೋಷಿಸಿದ್ದರು. ಅನುದಾನದ ಕೊರತೆ ಕಾರಣಕ್ಕೆ ಅವುಗಳು ಕಾರ್ಯರೂಪಕ್ಕೆ ಬರಲಿಲ್ಲ. 2017-18ರ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ 10 ತಾಲೂಕುಗಳನ್ನು ಸೇರಿಸಿ ಒಟ್ಟು 53 ತಾಲೂಕುಗಳನ್ನು ಹೊಸ ತಾಲೂಕು ಕೇಂದ್ರಗಳನ್ನಾಗಿ ಘೋಷಿಸಿದ್ದರು. 2019ರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಮತ್ತೆ ಕೆಲವು ಹೆಸರುಗಳನ್ನು ಸೇರಿಸಿದರು. ಅದರಂತೆ, 2017ರಿಂದ 2023ರವರೆಗೆ ರಾಜ್ಯದಲ್ಲಿ ಒಟ್ಟು 64 ಹೊಸ ತಾಲೂಕುಗಳ ಘೋಷಣೆ ಆಗಿದೆ.

ಮಿನಿ ವಿಧಾನಸೌಧದ ಕಥೆ
– ಯಲಹಂಕ, ಕೆಜಿಎಫ್, ಮೂಡುಬಿದಿರೆ, ಕಡಬ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಪೂರ್ಣ
– ಮೂಲ್ಕಿ, ಹೆಬ್ರಿ, ಕಾಪು, ಬೈಂದೂರು, ಕುರಗೋಡು, ದಾಂಡೇಲಿ, ಬ್ರಹ್ಮಾವರ, ಕಂಪ್ಲಿ, ಬಬಲೇಶ್ವರ, ತಿಕೋಟಗಳಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ
– ನ್ಯಾಮತಿ, ಹನೂರು, ಪೊನ್ನಂಪೇಟೆ, ಕುಶಾಲನಗರ, ಮೂಡಲಗಿ, ಲಕ್ಷ್ಮೇಶ್ವರ, ಗಜೇಂದ್ರಗಡ, ನಿಡಗುಂದಿ, ಕೊಲ್ಹಾರ, ಹುಣಸಗಿ, ವಡಗೇರ ತಾಲೂಕುಗಳಲ್ಲಿ ನಿರ್ಮಾಣಕ್ಕೆ ಜಾಗದ ಪ್ರಸ್ತಾವನೆ ಜಿಲ್ಲಾಧಿಕಾರಿಗಳಿಂದ ಇನ್ನಷ್ಟೇ ಬರಬೇಕಿದೆ

80 ಕೋಟಿ ರೂ. ಅನುದಾನ
42 ತಾಲೂಕು ಆಡಳಿತ ಸೌಧದ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ 80 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯದಲ್ಲಿ ಹೊಸದಾಗಿ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಶೌಚಾಲಯ, ಲಿಫ್ಟ್ ಅಳವಡಿಕೆ ಇನ್ನಿತರ ಎಲ್ಲಾ ಪೂರಕ ಸೌಲಭ್ಯಗಳನ್ನು ಒಳಗೊಂಡಂತೆ 10 ಕೋಟಿ ರೂ.ಗಳ ಮಿತಿಯೊಳಗೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ಅವಕಾಶವಿದೆ. ಆದರೆ, ಈ ಹಣ ಸಾಕಾಗಲ್ಲ ಅನ್ನುವ ಮಾತುಗಳೂ ಇದ್ದಾವೆ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.