LS;11 ಅಭ್ಯರ್ಥಿಗಳ SP ಪಟ್ಟಿ ಬಿಡುಗಡೆ:ಗ್ಯಾಂಗ್ಸ್ಟರ್ ಮುಖ್ತಾರ್ ಸಹೋದರ ಕಣಕ್ಕೆ
ಜೈಲು ಶಿಕ್ಷೆಗೆ ಗುರಿಯಾಗಿದ ಬಳಿಕ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು...
Team Udayavani, Feb 19, 2024, 5:17 PM IST
ಲಕ್ನೋ : ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಎದುರಿಸಲು ಸಮಾಜವಾದಿ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಸೋಮವಾರ 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಗ್ಯಾಜಿಪುರದಿಂದ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಯ ಸಹೋದರ ಆಫ್ಜಲ್ ಅನ್ಸಾರಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಕಳೆದ ವರ್ಷ ಕ್ರಿಮಿನಲ್ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ ಬಳಿಕ ಅಫ್ಜಲ್ ಅನ್ಸಾರಿ ಯನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು
2007 ರ ದರೋಡೆಕೋರರ ಕಾಯಿದೆ ಪ್ರಕರಣದಲ್ಲಿ ಘಾಜಿಪುರದ ವಿಶೇಷ ನ್ಯಾಯಾಲಯವು 2023 ಎಪ್ರಿಲ್ ನಲ್ಲಿ ಅನ್ಸಾರಿ ಮತ್ತು ಅವರ ಸಹೋದರ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರನ್ನು ದೋಷಿಗಳೆಂದು ಘೋಷಿಸಿತು. ಅಫ್ಜಲ್ ಅನ್ಸಾರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದರೆ, ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ನವೆಂಬರ್ 29, 2005 ರಂದು ಆಗಿನ ಗಾಜಿಪುರದ ಬಿಜೆಪಿ ಶಾಸಕ ಕೃಷ್ಣನಾದ್ ರೈ ಅವರ ಹತ್ಯೆ ಮತ್ತು 1997 ರಲ್ಲಿ ವಾರಾಣಸಿ ಮೂಲದ ವ್ಯಾಪಾರಿ ನಂದ್ ಕಿಶೋರ್ ರುಂಗ್ಟಾ ಅವರನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಸಾರಿ ಸಹೋದರರ ವಿರುದ್ಧ ಯುಪಿ ದರೋಡೆಕೋರರ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಮುಜಾಫರ್ನಗರದ ಹರೇಂದ್ರ ಮಲಿಕ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.