“Hampi ಕನ್ನಡ ವಿವಿಗೆ ವಿದ್ಯುತ್ ಬಿಲ್ ಪಾವತಿಸಲು ಅನುದಾನ ನೀಡಿ’
Team Udayavani, Feb 19, 2024, 8:47 PM IST
ವಿಧಾನ ಪರಿಷತ್ತು: ವಿದ್ಯುತ್ ಬಿಲ್ ಕಟ್ಟದ ಪರಿಸ್ಥಿತಿಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯವಿದ್ದು ಆ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಆ ವಿವಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್‌ನ ಉಮಾಶ್ರೀ ಸರ್ಕಾರವನ್ನು ಆಗ್ರಹಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಾಡಿನ ಹೆಮ್ಮೆಯ ಕನ್ನಡ ವಿವಿ ಈಗ ಅನುದಾನವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ನಾಡಿನ ಏಕೈಕ ಭಾಷಾ ವಿವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ವಿಶ್ವವಿದ್ಯಾನಿಲಯ ಇದೀಗ ವಿದ್ಯುತ್ ಬಿಲ್ ಪಾವತಿಸಲಾಗದ ಸ್ಥಿತಿಯಲ್ಲಿದೆ.
ಸುಮಾರು 1 ಕೋಟಿ ರೂ. ಗೂ ಅಧಿಕ ಬಿಲ್ ಪಾವತಿ ಮಾಡಬೇಕಾಗಿದ್ದು ವಿದ್ಯುತ್ ಇಲಾಖೆ ಅಧಿಕಾರಿಗಳು ಬಿಲ್ ಕಟ್ಟದಿದ್ದರೆ ವಿವಿಗೆ ನೀಡಿರುವ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಸೂಕ್ತ ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಸರ್ಕಾರದ ಪರವಾಗಿ ಉತ್ತರಿಸಿದ ಸಭಾನಾಯಕ ಭೋಸರಾಜ್, ಈ ವಿಚಾರವನ್ನು ಸಂಬಂಧಪಟ್ಟ ಇಲಾಖೆ ಸಚಿವರ ಗಮನಕ್ಕೆ ತರುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.