Davanagere; ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೋರಬೇಕು: ಕೆ.ಎಸ್. ಈಶ್ವರಪ್ಪ ಆಗ್ರಹ
Team Udayavani, Feb 19, 2024, 6:12 PM IST
ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರಿಗೆ ಆಹ್ವಾನ ಇರಲಿಲ್ಲ ಎಂಬ ಸುಳ್ಳು ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೋರಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದವರೇ ಆದ ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಒಳಗೊಂಡಂತೆ ಅನೇಕರು ಭಾಗವಹಿಸಿದ್ದಾರೆ ಎಂದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೀಗೆ ಕಾಂಗ್ರೆಸ್ ನವರು ಒಂದು ಸುಳ್ಳನ್ನೇ ನೂರು ಬಾರಿ ಹೇಳುವ ಮೂಲಕ ಸತ್ಯ ಮಾಡಲು ಹೊರಟವರು. ಸಿದ್ದರಾಮಯ್ಯ ಹಿಜಾಬ್ ಧರಿಸಿಕೊಂಡು ಬರಬಹುದು ಎಂದು ಹೇಳಿದರು. ಹಿಂದೂ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ನಾನು ಹಾಗೆ ಹೇಳಿಯೇ ಇಲ್ಲ ಎಂದರು. ಸುಳ್ಳು ಹೇಳುವುದರಲ್ಲಿ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.