![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 19, 2024, 10:46 PM IST
ಬೆಂಗಳೂರು: ಕೊಡಗು ಜಿಲ್ಲೆಗೆ ಅನ್ವಯ ಆಗುವಂತೆ ಪ್ರತಿ ಹದಿನೆಂಟು ಸಾವಿರ ಗ್ರಾಮೀಣ ಜನತೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಜಿಲ್ಲಾ ಪಂಚಾಯತ್ ಸದಸ್ಯರನ್ನು ಚುನಾಯಿಸುವ ಅವಕಾಶ ನೀಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.
ಕೊಡಗು ಜಿಲ್ಲೆ ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನ ಸಾಂದ್ರತೆ ಮತ್ತು ಜನಸಂಖ್ಯೆ ಚದರಿದ ಗುಡ್ಡಗಾಡು ಪ್ರದೇಶವಾಗಿದೆ. ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯತ್ ಕ್ಷೇತ್ರವು ಭೌಗೋಲಿಕವಾಗಿ 100 ಕಿ.ಮೀ.ವರೆಗೆ ವ್ಯಾಪಿಸಿದೆ.
ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಇದನ್ನು ಪರಿಗಣಿಸಿದ ಸರಕಾರ ಈ ಮಸೂದೆಯನ್ನು ಮಂಡಿಸಿತ್ತು.
ಜಿಪಂ, ತಾಪಂ ವೈಜ್ಞಾನಿಕವಾಗಿ ಪುನರ್ ವಿಂಗಡಣೆ: ಖರ್ಗೆ
ಮಸೂದೆಯನ್ನು ಮತಕ್ಕೆ ಹಾಕುವ ಮುನ್ನ ನಡೆದ ಚರ್ಚೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಮಸೂದೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ಜನಸಂಖ್ಯೆಯ ಜತೆಗೆ ಭೂ ವಿಸ್ತೀರ್ಣವನ್ನೂ ಪರಿಗಣಿಸಿ ಕ್ಷೇತ್ರದ ಗಾತ್ರವನ್ನು ನಿಗದಿ ಪಡಿಸಬೇಕು ಎಂದು ಸಲಹೆ ನೀಡಿದರು. ಹಾಗೆಯೇ ತಾಲೂಕು ಪಂಚಾಯತ್‌ಗಳಿಗೆ ಗ್ರಾ.ಪಂ.ಗಳನ್ನು ವೈಜ್ಞಾನಿಕ ರೀತಿಯಲ್ಲಿ ಪುನರ್ ವಿಂಗಡಣೆ ಮಾಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಂದಿನ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಗಳ ಕ್ಷೇತ್ರ ಪುನರ್ ವಿಂಗಡಣೆಯನ್ನು ವೈಜ್ಞಾನಿಕವಾಗಿ ಮಾಡುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.