ಸುಳ್ಯ: ಕೇರಳ ಗಡಿ ಭಾಗದಲ್ಲಿ ಆನೆಗಳ ದಾಳಿ; ಕೇರಳದಿಂದ ಪರಹಾರ ತರಿಸಬಹುದೇ: ಡಿವಿಎಸ್ ಟ್ವೀಟ್
Team Udayavani, Feb 21, 2024, 12:40 AM IST
ಸುಳ್ಯ: ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿದ್ದು, ಇದಕ್ಕೆ ಕೇರಳ ಸರಕಾರದಿಂದ ಪರಿಹಾರ ತರಿಸಬಹುದೇ ಎಂದು ಕಾಂಗ್ರೆಸ್ ಅನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ ಕೊಡಲು ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆಯಬಹುದೇ? ಎಂದು ಕರ್ನಾಟಕ ಕಾಂಗ್ರೆಸ್‌ಗೆ ಡಿವಿ ಸದಾನಂದ ಗೌಡ ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇರಳದ ವಯನಾಡ್‌ನಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತಿರುವ ವ್ಯಕ್ತಿಗೆ ಕರ್ನಾಟಕದ ತೆರಿಗೆ ಹಣದಿಂದ ಪರಿಹಾರ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದೂ ಅವರನ್ನು ಪೋಸ್ಟ್ ನಲ್ಲಿ ಮೂಲಕ ಪ್ರಶ್ನಿಸಿದ್ದಾರೆ.
ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ ಕೊಡಲು ನಿಮ್ಮ @RahulGandhi ಹಾಗು @kcvenugopalmp ಗೆ ಪತ್ರ ಬರೆಯಬಹುದೇ ? @INCKarnataka pic.twitter.com/fhG7qyt5Fb
— Sadananda Gowda (@DVSadanandGowda) February 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.