2025-26ರಿಂದ ವರ್ಷಕ್ಕೆ 2 ಬಾರಿ 10, 12ನೇ ತರಗತಿ ಪರೀಕ್ಷೆ ಬರೆವ ಅವಕಾಶ: ಸಚಿವ ಪ್ರಧಾನ್
Team Udayavani, Feb 21, 2024, 9:22 AM IST
ರಾಯ್ಪುರ: 10ನೇ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ಬರೆಯುವಂಥ ಆಯ್ಕೆ ವಿದ್ಯಾರ್ಥಿಗಳಿಗೆ 2025-26ರ ಶೈಕ್ಷಣಿಕ ವರ್ಷದಿಂದ ದೊರೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಛತ್ತೀಸಗಢದ ರಾಯ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 211 ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪಿಎಂ ಶ್ರೀ(ಪ್ರೈಮ್ ಮಿನಿಸ್ಟರ್ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ)ಗೆ ಚಾಲನೆ ನೀಡಿ ಮಾತನಾಡಿದ ಅವರು, “ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ತಗ್ಗಿಸುವುದು 2020ರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯ ಉದ್ದೇಶಗಳ ಪೈಕಿ ಒಂದಾಗಿದೆ.
ಈ ಹಿನ್ನೆಲೆಯಲ್ಲಿ ವರ್ಷಕ್ಕೆ ಎರಡು ಬಾರಿ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಈ ಪೈಕಿ ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ಕೂಡ ವಿದ್ಯಾರ್ಥಿಗಳಿಗೆ ನೀಡಲಾಗಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Senior Supreme Court Lawyer: ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.