Namma Metro: ಕೈಕೊಟ್ಟ ಸಿಗ್ನಲಿಂಗ್‌: 3 ಗಂಟೆ ಮೆಟ್ರೋ ಸ್ಥಗಿತ


Team Udayavani, Feb 21, 2024, 12:15 PM IST

Namma Metro: ಕೈಕೊಟ್ಟ ಸಿಗ್ನಲಿಂಗ್‌: 3 ಗಂಟೆ ಮೆಟ್ರೋ ಸ್ಥಗಿತ

ಬೆಂಗಳೂರು: ಸಿಗ್ನಲಿಂಗ್‌ನಲ್ಲಿಯ ಸಂವಹನ ವ್ಯವಸ್ಥೆ ಕೈಕೊಟ್ಟಿದ್ದರಿಂದ ಮಂಗಳವಾರ ಮೂರು ತಾಸು “ನಮ್ಮ ಮೆಟ್ರೋ’ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು. ದಟ್ಟಣೆ ಅವಧಿಯಲ್ಲೇ ಉಂಟಾದ ಈ ಅವ್ಯವಸ್ಥೆಯ ಬಿಸಿಗೆ ಎಲ್ಲ ವರ್ಗದ ಪ್ರಯಾಣಿಕರೂ ಹೈರಾಣಾದರು.

ಶಾಲಾ-ಕಾಲೇಜಿಗೆ ಹೊರಟ ವಿದ್ಯಾರ್ಥಿಗಳು, ಕಚೇರಿ ಮತ್ತಿತರ ಕೆಲಸಗಳಿಗೆ ತೆರಳುವವರು, ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್‌ ಹೊರಟವರು ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲಿಗೆ ಕಾದುಕುಳಿತರು. ನಿಗದಿತ ಸಮಯಕ್ಕಿಂತ ಸಾಕಷ್ಟು ತಡವಾಗಿ ಬರುತ್ತಿದ್ದ ಮೆಟ್ರೋ ರೈಲಿಗೆ ಜನ ಮುಗಿಬೀಳುತ್ತಿದ್ದರು. ಇದರಿಂದ ಬೋಗಿಗಳು ಕಿಕ್ಕಿರಿದಿದ್ದವು. ಅಷ್ಟೇ ಅಲ್ಲ, ನಿಲ್ದಾಣಗಳೂ ಗಿಜಗುಡುತ್ತಿದ್ದವು. ಅದರಲ್ಲೂ ಮೆಜೆಸ್ಟಿಕ್‌ನ ಕೆಂಪೇಗೌಡ ಇಂಟರ್‌ಚೇಂಜ್‌ನಲ್ಲಿ ದಟ್ಟಣೆ ತುಸು ಹೆಚ್ಚಾಗಿದ್ದು, ಸೇವೆಯಲ್ಲಿನ ವ್ಯತ್ಯಯದ ಬಿಸಿ ತುಸು ಜೋರಾಗಿಯೇ ತಟ್ಟಿತು.

ಬೆಳಗಿನ ಜಾವ 6.15ಕ್ಕೆ ಬೈಯಪ್ಪನಹಳ್ಳಿ ಹಾಗೂ ಗರುಡಾಚಾರ್‌ಪಾಳ್ಯ ನಿಲ್ದಾಣಗಳ ನಡುವೆ ಸಿಗ್ನಲಿಂಗ್‌ ಸಿಸ್ಟಮ್‌ನಲ್ಲಿ ಸಂವಹನ ಕಡಿತಗೊಂಡಿತು. ಇದರಿಂದ ವಿವಿಧ ಡೇಟಾ ಪ್ರಕಾರಗಳಿಗೆ ನಿಖರ-ಸಮಯದ ಸ್ಥಿತಿ ನವೀಕರಣಗಳು ಲಭ್ಯವಾಗಲಿಲ್ಲ. ಹೀಗಾಗಿ ಮೆಟ್ರೋ ರೈಲುಗಳು ಬೆಳಗ್ಗೆ 9.20ರವರೆಗೆ ತೀರಾ ನಿಧಾನಗತಿಯಲ್ಲಿ ಸಂಚರಿಸಿದವು. ಪರಿಣಾಮ ರೈಲುಗಳ ನಡುವಿನ ಅಂತರ ಕೂಡ ಹೆಚ್ಚಾಯಿತು. ಸಾಮಾನ್ಯವಾಗಿ “ಪೀಕ್‌ ಅವರ್‌’ನಲ್ಲಿ ಪ್ರತಿ ಐದು ನಿಮಿಷಕ್ಕೊಂದು ರೈಲು ಸಂಚರಿಸುತ್ತವೆ. 20 ನಿಮಿಷ ಕಾದರೂ ರೈಲುಗಳು ಬರಲಿಲ್ಲ. ಮತ್ತೂಂದೆಡೆ ಪ್ರಯಾಣಿಕರ ಸಂಖ್ಯೆ ಪ್ರತಿ ಐದು ನಿಮಿಷಕ್ಕೆ ದುಪ್ಪಟ್ಟಾಗುತ್ತಿತ್ತು.

ಮೆಜೆಸ್ಟಿಕ್‌ನ ಇಂಟರ್‌ಚೇಂಜ್‌ ನಿಲ್ದಾಣವಂತೂ ಪ್ರಯಾಣಿಕರು ತುಂಬುತುಳುಕುತ್ತಿದ್ದರು. ಬೈಯಪ್ಪನಹಳ್ಳಿ, ಸ್ವಾಮಿ ವಿವೇಕಾನಂದ ರಸ್ತೆ ನಿಲ್ದಾಣ ಸೇರಿ ನೇರಳೆ ಮಾರ್ಗದ ಬಹುತೇಕ ಎಲ್ಲ ನಿಲ್ದಾಣಗಳಲ್ಲಿ ರೈಲಿಗಾಗಿ ಕಾದು ಪ್ರಯಾಣಿಕರು ಸುಸ್ತಾದರು. ಇದರ ಪರಿಣಾಮ ಹಸಿರು ಮಾರ್ಗದಲ್ಲೂ ಸಂಚಾರ ದಟ್ಟಣೆ ಉಂಟಾಯಿತು. ವ್ಯತ್ಯಯ ಉಂಟಾಗಿ ಎರಡು ತಾಸಿನ ನಂತರ ಎಚ್ಚೆತ್ತ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), ಈ ಬಗ್ಗೆ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ಈ ಬಗ್ಗೆ ಮಾಹಿತಿ ನೀಡಿತು!

ಸಹಜ ಸ್ಥಿತಿ ಮರುಳಿದರೂ ತಗ್ಗದ ದಟ್ಟಣೆ:

ನೇರಳೆ ಮಾರ್ಗದಲ್ಲಿ ಬೆಳಗ್ಗೆ 9.20ಕ್ಕೆ ತಾಂತ್ರಿಕ ತೊಂದರೆ ನಿವಾರಣೆಗೊಂಡು, 9.22ರಿಂದ ಎಂದಿನಂತೆ ಸೇವೆ ಶುರುವಾಯಿತು. ಆದರೆ, ಬೆಳಗ್ಗೆ 10.30ರವರೆಗೂ ಕೆಲವು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹಾಗೇ ಇತ್ತು. ಈ ನಡುವೆ 20ಕ್ಕೂ ಹೆಚ್ಚಿನ ರೈಲುಗಳ ಸಂಚಾರ ವ್ಯತ್ಯಯವಾಗಿತ್ತು. ಮೂರು ಶಾರ್ಟ್‌ಲೂಪ್‌ ರೈಲುಗಳ ಕಾರ್ಯಾಚರಣೆ ನಡೆಸುವ ಮೂಲಕ ಬಿಎಂಆರ್‌ಸಿಎಲ್‌, ಸಮಸ್ಯೆ ಪ್ರಮಾಣ ತಗ್ಗಿಸಲು ಯತ್ನಿಸಿತು. ಆದರೆ, ನಿರೀಕ್ಷಿತ ಫ‌ಲ ನೀಡಲಿಲ್ಲ. ಎರಡು ದಿನಗಳ ಹಿಂದಷ್ಟೇ ಚಲ್ಲಘಟ್ಟ-ಕೆಂಗೇರಿ ನಡುವೆ ಟ್ರ್ಯಾಕ್‌ನಲ್ಲಿ ಮೆಟ್ರೋ ರೈಲು ನಿಂತು ಪ್ರಯಾಣಿಕರನ್ನು ಆತಂಕಕ್ಕೆ ದೂಡಿತ್ತು. ಜ.27ರಂದು ವಿದ್ಯುತ್‌ ಪೂರೈಕೆ ವ್ಯತ್ಯಯದಿಂದಾಗಿ ಎಂ.ಜಿ.ರಸ್ತೆ- ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಡಿಸೆಂಬರ್‌ನಲ್ಲೂ ಇದೇ ಸಮಸ್ಯೆ ಉಂಟಾಗಿತ್ತು. ಅ.3ರಂದು ರಾಜಾಜಿನಗರ ಬಳಿ ರೋಡ್‌ ಕಂ ರೈಲ್‌ ವೆಹಿಕಲ್‌ ಸಿಲುಕಿ ಹಸಿರು ಮಾರ್ಗದಲ್ಲಿ ವ್ಯತ್ಯಯ ಉಂಟಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಮರ್ಪಕ ಮಾಹಿತಿ ನೀಡದ ನಿಗಮದ ವಿರುದ್ಧ ಪ್ರಯಾಣಿಕರ ತೀವ್ರ ಆಕ್ರೋಶ: 

ಬೆಳಗ್ಗೆ 8.48ಕ್ಕೆ ಅಧಿಕೃತವಾಗಿ ಬಿಎಂಆರ್‌ಸಿಎಲ್‌ ಈ ಬಗ್ಗೆ ಮಾಹಿತಿ ನೀಡಿತು. ಅಷ್ಟೊತ್ತಿಗಾಗಲೇ ಸಮಸ್ಯೆ ಬಗ್ಗೆ ಪ್ರಯಾಣಿಕರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ನಿಗಮದ ವಿರುದ್ಧ ಹರಿಹಾಯ್ದಿದ್ದರು. ಪ್ರಯಾಣಿಕರಿಗೆ ಸಮರ್ಪಕ ಮಾಹಿತಿ ನೀಡದೆ ಟಿಕೆಟ್‌ ವಿತರಿಸುತ್ತಿದ್ದ ಬಗ್ಗೆಯೂ ಜನತೆ ಅಸಮಾಧಾನ ವ್ಯಕ್ತಪಡಿಸಿದರು. ಜತೆಗೆ ಆ್ಯಪ್‌ನಲ್ಲಿ ಕ್ಯೂಆರ್‌ ಕೋಡ್‌ ಟಿಕೇಟ್‌ ಖರೀದಿ ವೇಳೆಯೂ ಈ ಸಂಬಂಧ ಮಾಹಿತಿ ಇರಲಿಲ್ಲ ಎಂದು ಕಿಡಿಕಾರಿದರು. “ಎಕ್ಸ್’ನಲ್ಲಿ ಸಾಕಷ್ಟು ಪ್ರಯಾಣಿಕರು ದಟ್ಟಣೆ ಬಗ್ಗೆ ಫೋಟೋ ಹಂಚಿಕೊಂಡು ಬಿಎಂಆರ್‌ಸಿಎಲ್‌ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದರು. ಸಾಮಾನ್ಯವಾಗಿ 10 ನಿಮಿಷಕ್ಕೊಂದು ರೈಲು ಸೇವೆ ಇರುತ್ತದೆ. ಅರ್ಧ ಗಂಟೆಗೊಂದು ರೈಲುಗಳು ಬರುತ್ತಿವೆ. ಬೆಳಗ್ಗೆ 8.15ಕ್ಕೆ ಬಂದಿದ್ದೇವೆ. 9.30 ಆದರೂ ಇನ್ನೂ ನಿಲ್ದಾಣದಲ್ಲೇ ಇದ್ದೇವೆ ಎಂದು ಸ್ವಾಮಿ ವಿವೇಕಾನಂದ ನಿಲ್ದಾಣದಲ್ಲಿದ್ದ ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.

 

 

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.