Drinking water problem; ಬಾಯಾರಿದ ಕರ್ನಾಟಕ: 3,800ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ
ಮಾರ್ಚ್ ವೇಳೆಗೆ ಜಲಕ್ಷಾಮ ತಾರಕಕ್ಕೆ?
Team Udayavani, Feb 22, 2024, 7:10 AM IST
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, 3,800ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜನರು ತತ್ತರಿಸುತ್ತಿದ್ದಾರೆ. ಮಾರ್ಚ್ ವೇಳೆಗೆ ಇಡೀ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಬಹುದು ಎಂಬ ಆತಂಕ ಉದಯವಾಣಿ ನಡೆಸಿದ “ರಿಯಾಲಿಟಿ ಚೆಕ್’ನಲ್ಲಿ ವ್ಯಕ್ತವಾಗಿದೆ.
ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ಒಣಗಿವೆ, ಅಂತರ್ಜಲ ದಿನದಿಂದ ದಿನಕ್ಕೆ ಇಳಿಯುತ್ತಿದೆ, ಕುಡಿಯುವ ನೀರಿನ ಆಸರೆ ಬತ್ತುತ್ತಿದೆ. ಸರಕಾರದ ಸೂಚನೆಯಂತೆ ಜಿಲ್ಲಾಡಳಿತಗಳು ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿರುವುದು ಕಂಡುಬಂದಿದೆ.
ಹಲವು ಕಡೆಗಳಲ್ಲಿ ಬೋರ್‌ವೆಲ್‌ಗಳಲ್ಲಿ ನೀರು ಕಡಿಮೆಯಾಗಿದ್ದು, ಹೊಸದಾಗಿ ಬೋರ್‌ವೆಲ್‌ಗಳನ್ನು ತೋಡುವ ಪ್ರಯತ್ನಕ್ಕೆ ಆಡಳಿತ ಕೈಹಾಕಿದೆ. ಟ್ಯಾಂಕರ್‌ಗಳ ಮೂಲಕ ನೀರನ್ನು ಪೂರೈಸಲು, ಜಿಲ್ಲಾಡಳಿತ ಟೆಂಡರ್ ಆಹ್ವಾನಿಸಿದ್ದು, ಹಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಈಗಾಗಲೇ ನೀರು ಪೂರೈಸಲಾಗುತ್ತಿದೆ.
ವಿಶೇಷವಾಗಿ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಕುಡಿ ಯುವ ನೀರಿನ ಸಮಸ್ಯೆ ಗಂಭೀರ ವಾಗಿದೆ. ಉಡುಪಿಯಲ್ಲಿ ಅಂತರ್ಜಲ ಶೇ. 6ರಷ್ಟು ಕುಸಿದ ಬಗ್ಗೆ ವರದಿಯಾಗಿದೆ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಹಲವು ನಗರಗಳಲ್ಲಿ, ಈಗಾಗಲೇ 15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.
ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ನೀರಿಗೆ ಹಾಹಾಕಾರ ಎದುರಾಗುವ ಬಗ್ಗೆ ಜಲಮಂಡಳಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರನ್ನೇ ಆಶ್ರಯಿಸುವವರ ಪ್ರಮಾಣ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.