Ankle Injury: ಐಪಿಎಲ್ ಗಿಲ್ಲ ಮೊಹಮ್ಮದ್ ಶಮಿ; ಗುಜರಾತ್ ಗೆ ಭಾರಿ ಹಿನ್ನಡೆ
Team Udayavani, Feb 22, 2024, 3:36 PM IST
ಹೊಸದಿಲ್ಲಿ: ಕಳೆದ ಏಕದಿನ ವಿಶ್ವಕಪ್ ನಲ್ಲಿ ಮಿಂಚಿದ್ದ ಭಾರತದ ವೇಗಿ ಮೊಹಮ್ಮದ್ ಶಮಿ ಅವರು ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವುದಿಲ್ಲ. ಈ ಬಗ್ಗೆ ವರದಿಯಾಗಿದೆ.
ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಎಡ ಪಾದದ ಗಾಯದಿಂದಾಗಿ ಬ್ರಿಟನ್ ನಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಐಪಿಎಲ್ 2024 ರಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.
ಮೊಹಮ್ಮದ್ ಶಮಿ ಅವರು ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಆಡುತ್ತಾರೆ. ಹೊಸ ನಾಯಕ ಶುಭ್ಮನ್ ಗಿಲ್ ಅವರಿಗೆ ಇದೀಗ ಶಮಿ ಅಲಭ್ಯತೆ ದೊಡ್ಡ ಹಿನ್ನಡೆಯಾಗಿದೆ.
ಕಳೆದೆರಡು ಸೀಸನ್ ಗಳಲ್ಲಿ ಶಮಿ ಅವರು ಗುಜರಾತ್ ತಂಡಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ. 2022ರ ಸೀಸನ್ ನಲ್ಲಿ 20 ವಿಕೆಟ್ ಕಿತ್ತಿದ್ದ ಶಮಿ, 2023ರ ಆವೃತ್ತಿಯಲ್ಲಿ 18.64ರ ಸರಾಸರಿಯಲ್ಲಿ 28 ವಿಕೆಟ್ ಕಿತ್ತು ಮಿಂಚಿದ್ದರು. ಈ ಎರಡೂ ಆವೃತ್ತಿಗಳಲ್ಲಿ ಗುಜರಾತ್ ಫೈನಲ್ ಪ್ರವೇಶ ಪಡೆದು ಮೊದಲ ಬಾರಿ ಗೆಲುವು ಕಂಡಿತ್ತು.
ಗುಜರಾತ್ ಟೈಟಾನ್ಸ್ ಇದುವರೆಗೂ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಶಮಿ ಅಲಭ್ಯತೆಯ ಕಾರಣದಿಂದ ಗುಜರಾತ್ ಫ್ರಾಂಚೈಸಿಯು ಬದಲಿ ಆಟಗಾರನ ಹುಡುಕಾಟದಲ್ಲಿದೆ. ಐಪಿಎಲ್ ಮಿನಿ ಹರಾಜಿನಲ್ಲಿ ಬಿಕರಿಯಾಗದ ಆಟಗಾರನನ್ನು ಶಮಿ ಬದಲಿಯಾಗಿ ಖರೀದಿ ಮಾಡಬಹುದು.
“ಶಮಿ ಅವರು ವಿಶೇಷ ಪಾದದ ಚುಚ್ಚುಮದ್ದನ್ನು ತೆಗೆದುಕೊಳ್ಳಲು ಜನವರಿಯ ಕೊನೆಯ ವಾರದಲ್ಲಿ ಲಂಡನ್ ನಲ್ಲಿದ್ದರು. ಮೂರು ವಾರಗಳ ನಂತರ ಅವರು ಲಘು ಓಟವನ್ನು ಪ್ರಾರಂಭಿಸಬಹುದು ಎಂದು ಅವರಿಗೆ ತಿಳಿಸಲಾಯಿತು. ಆದರೆ ಚುಚ್ಚುಮದ್ದು ಅವರಿಗೆ ಕೆಲಸ ಮಾಡಲಿಲ್ಲ. ಹೀಗಾಗಿ ಈಗ ಉಳಿದಿರುವ ಏಕೈಕ ಆಯ್ಕೆಯೆಂದರೆ ಅದು ಶಸ್ತ್ರಚಿಕಿತ್ಸೆ. ಅವರು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗಾಗಿ ಯುಕೆಗೆ ತೆರಳುತ್ತಾರೆ. ಐಪಿಎಲ್ ನಲ್ಲಿ ಆಡುವುದು ಕಷ್ಟ” ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.