Shree Swarnavalli Matha: ಶ್ರೀ ಸೋಂದಾ ಸ್ವರ್ಣವಲ್ಲೀ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ…
ಶ್ರೀಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿ ನಾಮಕರಣ
Team Udayavani, Feb 22, 2024, 3:49 PM IST
ಶಿರಸಿ: ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ 55ನೇ ನೂತನ ಯತಿಗಳಾಗಿ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು.
ಸ್ವರ್ಣವಲ್ಲೀ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳ ನಡೆದವು.
ಕಳೆದ ಫೆ.18ರಿಂದ ನಡೆಯುತ್ತಿದ್ದ ಶಿಷ್ಯ ಸ್ವೀಕಾರ ಮಹೋತ್ಸವದ ಕಾರ್ಯಕ್ರಮಗಳ ಕೊನೇಯ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ಲ ತ್ರಯೋದಶಿ ಗುರುವಾರ ಬೆಳಿಗ್ಗೆ 10 ರಿಂದ 10:10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ನೀಡಲಾಯಿತು.
ಮುಂಜಾನೆ 5ರಿಂದಲೇ ವಿವಿಧ ಧಾರ್ಮಿಕ ಹಾಗೂ ಕಾಯ ಶೋಧನ ಕಾರ್ಯಗಳು ಶ್ರೀಮಠದಲ್ಲಿ ನಡೆದವು. ಬೆಳಿಗ್ಗೆ 9:40ರ ಸುಮಾರಿಗೆ ಶ್ರೀಮಠದಿಂದ ಸುಮಾರು ಒಂದು ಕಿಮಿ ದೂರದ ಶಾಲ್ಮಲಾ ನದಿಯತ್ತ ಜಲಾಶಯಗಮನ ಮಾಡಲಾಯಿತು. ಬಳಿಕ ನೂತನ ಉತ್ತರಾಧಿಕಾರಿಗಳು ಸ್ನಾನ ಪೂರ್ಣಗೊಳಿಸಿ ಮೇಲ್ಮುಖವಾಗಿ ಜನಿವಾರ ತೆಗೆದು, ಶಿರದ ಮೇಲಿನ ಆರು ಕೂದಲನ್ನು ಹರಿದು, ಸಂಸಾರದ ಬಂಧ ಸಹಿತ, ಸರ್ವಸ್ವವನ್ನೂ ತ್ಯಾಗ ಮಾಡಿ ಏಳು ಹೆಜ್ಜೆ ಇಟ್ಟರು. ಪ್ರಪಂಚ ಬಂಧನ ಬಿಟ್ಟು ಸಚ್ಚಿದಾನಂದ ಸ್ವರೂಪಿಯಾದ ಅವರಿಗೆ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಕಾಷಾಯ ವಸ್ತ್ರ ನೀಡಿದರು.
ಇದೇ ಶುಭ ಘಳಿಗೆಯಲ್ಲಿ ಸಾವಿತ್ರೀ ಪ್ರವೇಶ, ಪ್ರೇಶೋಚ್ಛಾರಣೆ, ಬ್ರಹ್ಮ ದಂಡದ ಧಾರಣೆ ಕೂಡ ಮಾಡಲಾಯಿತು.
10:30ರ ಸುಮಾರಿಗೆ ಶಾಲ್ಮಾಲಾ ನದಿ ತಟದಲ್ಲಿ ನೂತನ ಯತಿಗಳು ಭೂ ಸ್ಪರ್ಷ ಮಾಡಿದರು. ಅಲ್ಲಿಂದ ಪಂಚ ವಾದ್ಯಗಳ, ವೈದಿಕರ ವೇದ ಘೋಷ, ನಾಲ್ಕು ಸಾವಿರಕ್ಕೂ ಅಧಿಕ ಮಾತೆಯರಿಂದ ಪೂರ್ಣ ಕುಂಭ ಸ್ವಾಗತದ ಮೂಲಕ ನೂತನ ಯತಿಗಳನ್ನು, ಸ್ವರ್ಣವಲ್ಲೀ ಹಾಗೂ ಇತರ ಮಠಗಳ ಯತಿಗಳನ್ನು ಶ್ರೀಮಠಕ್ಕೆ ಬರ ಮಾಡಿಕೊಳ್ಳಲಾಯಿತು.
ಶ್ರೀಮಠದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕೇಂದ್ರ ಮಾತೃ ಮಂಡಳಿ ಪ್ರಮುಖರು ಮಠದ ಆವಾರದಲ್ಲಿ ಸಾಂಪ್ರದಾಯಿಕ ಸ್ವಾಗತಿಸಿದರು. ಶ್ರೀಮಠಕ್ಕೆ ಆಗಮಿಸಿದ ಬಳಿಕ ಆರಾಧ್ಯ ದೇವರ ದರ್ಶನ ಪಡೆದು ಗುರುಮೂರ್ತಿ ಭವನಕ್ಕೆ ತೆರಳಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಎಂದು ನಾಮಕರಣವನ್ನು ಸ್ವರ್ಣವಲ್ಲೀ ಶ್ರೀಗಳು ಮಾಡಿದರು. ಪರ್ಯಂಕಶೌಚ, ಯೋಗಪಟ್ಟ, ಬ್ರಹ್ಮವಿದಾಶೀರ್ವಚನ ನಡೆಸಲಾಯಿತು.
ನಾಡಿನ ಹೆಸರಾಂತ ಯತಿಗಳಾದ ಎಡತೋರೆ ಶ್ರೀಶಂಕರ ಭಾರತೀ ಮಹಾ ಸ್ವಾಮೀಜಿ, ಹರಿಹರ ಪುರದ ಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸ್ವರೂಪಿ ಮಹಾ ಸ್ವಾಮೀಜಿ, ಬೆಂಗಳೂರಿನ ಕೂಡ್ಲಿ ಶೃಂಗೇರಿ ಮಠದ ವಿದ್ಯಾ ವಿಶ್ವೇಶ್ವರ ಭಾರತೀ ಮಹಾ ಸ್ವಾಮೀಜಿ, ಹೋಳೆನರಸೀಪುರದ ಶ್ರೀಪ್ರಕಾಶಾನಂದೇಂದ್ರ ಮಹಾ ಸ್ವಾಮೀಜಿ , ಶ್ರೀಮನ್ನೆಲಮಾವು ಮಠದ ಶ್ರೀಮಾಧವಾನಂದ ಭಾರತೀ ಮಹಾ ಸ್ವಾಮೀಜಿ, ತುರುವೇಕೇರೆಯ ಶ್ರೀಪ್ರಣವಾನಂದ ತೀರ್ಥ ಮಹಾ ಸ್ವಾಮೀಜಿ ಹಾಗೂ ಹಲವು ವಿದ್ವಾಂಸರು ಇಪ್ಪತ್ತಕ್ಕೂ ಅಧಿಕ ಸಾವಿರಕ್ಕೂ ಅಧಿಕ ಭಕ್ತ ಶಿಷ್ಯರು ಸಾಕ್ಷಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.