Mangalore: ಸ್ಟಾಕ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ 18.53 ಲ.ರೂ. ವಂಚನೆ
Team Udayavani, Feb 23, 2024, 7:15 AM IST
ಮಂಗಳೂರು: ಸ್ಟಾಕ್ ಟ್ರೇಡಿಂಗ್ ಹೆಸರಿನಲ್ಲಿ ಹೂಡಿಕೆ ಮಾಡಿಸಿ 18.53 ಲ.ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಜಯ ಕುಮಾರ್ ವಂಚನೆಗೊಳಗಾದವರು. ಅವರು ಫೇಸ್ಬುಕ್ನಲ್ಲಿ ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್ನ ಮೂಲಕ 2013ರ ಡಿ. 2ರಂದು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸೇರ್ಪಡೆಯಾಗಿದ್ದರು. ಆ ಗ್ರೂಪ್ನಲ್ಲಿ ಹಲವಾರು ಅಡ್ಮಿನ್, ಸದಸ್ಯರಿದ್ದರು. ಗ್ರೂಪ್ನ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತೀ ದಿನ ಆನ್ಲೈನ್ ವೀಡಿಯೋ ಕ್ಲಾಸ್ ಮೂಲಕ ಸ್ಟಾಕ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುವ ಬಗ್ಗೆ ವಿವರಿಸುತ್ತಿದ್ದ.
ವಿಜಯ ಅವರು ಅದನ್ನು ಸತ್ಯವೆಂದು ಭಾವಿಸಿ ಹಣ ತೊಡಗಿಸಿದ್ದರು. 2024ರ ಜ. 11ರಿಂದ ಫೆ. 5ರ ವರೆಗೆ ಹಂತ ಹಂತವಾಗಿ ಒಟ್ಟು 18.53 ಲ.ರೂ.ಗಳನ್ನು ಪಾವತಿಸಿದ್ದರು. ಅದನ್ನು ಹಿಂಪಡೆಯಲು ಸ್ಟಾಕ್ ಟ್ರೇಡಿಂಗ್ ಕಂಪೆನಿಯ ಕಸ್ಟಮರ್ ಕೇರ್ ಅವರನ್ನು ಸಂರ್ಪಿಕಿಸಿದಾಗ ಶೇ. 40 ಕಮಿಷನ್ ಆಗಿ ನೀಡುವಂತೆ ಹಾಗೂ ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದರು. ಆಗ ಅನುಮಾನ ಬಂದ ವಿಜಯ ಕುಮಾರ್ ಅವರು ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಗೊತ್ತಾಯಿತು. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.