Mangaluru; ನಿಗದಿತ ದರಕ್ಕಿಂತ ಹೆಚ್ಚು ವಸೂಲಿ: ನರ್ಸಿಂಗ್ ಹೋಂಗೆ 5 ಲಕ್ಷ ರೂ. ದಂಡ
ರೋಶನ್ ರಾಜ್ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರೂ ಅವರು ತನಿಖೆ ನಡೆಸಿರಲಿಲ್ಲ.
Team Udayavani, Feb 23, 2024, 10:09 AM IST
ಮಂಗಳೂರು: ನಿಗದಿಗಿಂತ ಹೆಚ್ಚು ದರ ವಸೂಲಿ ಮಾಡಿದ ನಗರದ ನರ್ಸಿಂಗ್ ಹೋಂಗೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ. ಮಹಿಳೆಯೊಬ್ಬರು ಹೆರಿಗೆಗಾಗಿ 2019ರ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅವಳಿ ಮಕ್ಕಳ ತೂಕ ಕಡಿಮೆ ಯಾಗಿದ್ದರಿಂದ ಎನ್ಐಸಿಯುಗೆ ದಾಖಲಿಸಲು ಹೆರಿಗೆ ವೈದ್ಯರು ಹೇಳಿದ್ದರು.
ಇದನ್ನೂ ಓದಿ:Sandeshkhali ಗದ್ದಲದ ನಡುವೆ ಶೇಖ್ ಷಹಜಹಾನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ
ಅದರಂತೆ ಮೇ 29ರಿಂದ ಜೂ.15ರ ವರೆಗೆ ಮಕ್ಕಳು ಚಿಕಿತ್ಸೆ ಪಡೆದಿದ್ದರು. ಜೂ.15ರಂದು ಮಹಿಳೆ 5,34,791ರೂ. ಪಾವತಿ ಮಾಡಿದ್ದರು. ನಿಗದಿಗಿಂತ ಹೆಚ್ಚು ದರ ವಸೂಲಿ ಮಾಡಿದ ಬಗ್ಗೆ ಮಹಿಳೆಯ ಪತಿ, ನ್ಯಾಯವಾದಿ ರೋಶನ್ ರಾಜ್ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರೂ ಅವರು ತನಿಖೆ ನಡೆಸಿರಲಿಲ್ಲ.
ರೋಶನ್ರಾಜ್ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಆರೋಗ್ಯ ಸಚಿವ ರಾಮುಲು ಅವರಿಗೆ ದೂರನ್ನು ನೀಡಿದ್ದರು. ಕೇಂದ್ರ ಸರಕಾರ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರನ್ನು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು. ಆದರೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಬಳಿಕ ರೋಶನ್ರಾಜ್ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಮಹಿಳೆ ಮತ್ತು ರೋಶನ್ರಾಜ್ ಹಾಗೂ ವೈದ್ಯರ ಅರ್ಜಿಯನ್ನು ಪರಿಶೀಲಿಸಿ ವಾದ-ವಿವಾದಗಳನ್ನು ಆಲಿಸಿದ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಕೆ. ಅವರು ನರ್ಸಿಂಗ್ ಹೋಂ ನವರು 5ಲಕ್ಷ ರೂ. ಹಣವನ್ನು 6 ವಾರದೊಳಗೆ ನೀಡಬೇಕೆಂದು ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.