Gyanvapi, ಮಥುರಾ ಮಸೀದಿ ವಿವಾದ ಬಗೆಹರಿಸಲು ಹೀಗೆ ಮಾಡಿ… ಅಜ್ಮೀರ್ ದರ್ಗಾ ಮುಖ್ಯಸ್ಥರ ಸಲಹೆ
Team Udayavani, Feb 23, 2024, 1:13 PM IST
ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಅಜ್ಮೀರ್ ದರ್ಗಾ ಮುಖ್ಯಸ್ಥರಾದ ಸೈಯದ್ ಜೈನುಲ್ ಅಬೇದಿನ್ ಸಲಹೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ಜ್ಞಾನವಾಪಿ, ಮಥುರಾ ಶಾಹಿ ಈದ್ಗಾ ಮಸೀದಿಗಳಿಗೆ ಸಂಬಂಧಿಸಿದ ವಿವಾದಗಳನ್ನು ನ್ಯಾಯಾಲಯಕ್ಕೆ ಮೊರೆ ಹೋಗುವ ಬದಲು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಅಜ್ಮೀರ್ ದರ್ಗಾ ಮುಖ್ಯಸ್ಥರು ಸಲಹೆಯನ್ನು ನೀಡಿದ್ದಾರೆ. ಯಾವುದೇ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಅಖಿಲ ಭಾರತ ಸೂಫಿ ಸಜ್ಜದಾನಶಿನ್ ಕೌನ್ಸಿಲ್ನ ರಾಜಸ್ಥಾನ ಘಟಕವು ಆಯೋಜಿಸಿದ್ದ “ಪೈಗಮ್-ಎ-ಮೊಹಬ್ಬತ್ ಹಮ್ ಸಬ್ ಕಾ ಭಾರತ್” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಬೇದಿನ್, ವಸುಧೈವ ಕುಟುಂಬಕಂ ನಾಗರಿಕತೆಯನ್ನು ಅನುಸರಿಸುವ ಮೂಲಕ ವಿಶ್ವದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಭಾರತವು ಸಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ.
ಈ ನಿಟ್ಟಿನಲ್ಲಿ ಶಾಂತಿಯನ್ನು ನೆಲೆಸುವಲ್ಲಿ ಭಾರತ ಉತ್ತಮ ಪಾತ್ರವನ್ನು ನಿರ್ವಹಿಸುತ್ತಿದೆ, ಆದ್ದರಿಂದ ನಮ್ಮ ದೇಶದ ಆಂತರಿಕ ಸಮಸ್ಯೆಗಳನ್ನು ನ್ಯಾಯಾಲಯದ ಬದಲು ಹೊರಗೆ ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ, ವಾಸ್ತವವೆಂದರೆ ಕಾಯ್ದೆಯ ನಿಬಂಧನೆಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ಬಳಿಕ ಕಾನೂನಿನಲ್ಲಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ತೊಂದರೆಯೂ ಇಲ್ಲ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ವಲಸಿಗರಿಗೆ ಈ ಕಾಯ್ದೆ ಪ್ರಯೋಜನವನ್ನು ನೀಡುತ್ತದೆ. ಇದು ಯಾರೊಬ್ಬ ಭಾರತೀಯರ ಪೌರತ್ವವನ್ನು ಕಸಿದುಕೊಳ್ಳಲು ಹೋಗುವುದಿಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: Mudigere: ಖಾರದ ಪುಡಿ ಎರಚಿ ತೋಟದ ಮನೆ ದರೋಡೆ ಪ್ರಕರಣ; ಪೊಲೀಸರಿಂದ ಐವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.