Kannada Cinema; ಬರಲಿದೆ ಮೆಜೆಸ್ಟಿಕ್-2; ಭರತ್ ಗೆ ಜೋಡಿಯಾಗಿ ಸಂಹಿತಾ ವಿನ್ಯಾ
Team Udayavani, Feb 23, 2024, 5:36 PM IST
“ಮೆಜೆಸ್ಟಿಕ್’ ಚಿತ್ರ ನಟ ದರ್ಶನ್ ಅವರಿಗೆ ಬ್ರೇಕ್ ನೀಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ “ಮೆಜೆಸ್ಟಿಕ್-2′ ಎಂಬ ಸಿನಿಮಾವೊಂದು ಬರುತ್ತಿದೆ. ರಾಮು ಈ ಚಿತ್ರದ ನಿರ್ದೇಶಕರು. ಶಿವರಾತ್ರಿ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ನಾಯಕ ನಟರಾಗಿ ಎಂಟ್ರಿಕೊಡುತ್ತಿದ್ದಾರೆ. ಚಿತ್ರದುರ್ಗ ಮೂಲದ ಟಿ. ಆನಂದಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಂದಲೂ ತಂತ್ರಜ್ಞನಾಗಿ ಕೆಲಸ ಮಾಡುತ್ತಿರುವ ರಾಮು ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ನಿರ್ಮಾಪಕ ಆನಂದಪ್ಪ ಮಾತನಾಡಿ, “ನಾನು ಈ ಹಿಂದೆ ಪಿಂಕ್ ನೋಟ್ ಎಂಬ ಚಿತ್ರವನ್ನು ಆರಂಭಿಸಿದ್ದೆ.ಅದಾಗಲೇ 90ರಷ್ಟು ಮುಗಿದಿದೆ. ಇದು ಎರಡನೇ ಚಿತ್ರ. ಸ್ನೇಹಿತ ರಾಮು ಬಹಳ ದಿನಗಳಿಂದ ಈ ಕಥೆ ಚೆನ್ನಾಗಿದೆ ನೋಡಿ ಅಂತ ಹೇಳ್ತಾ ಇದ್ದರು, ಒಮ್ಮೆ ಕಥೆ ಕೇಳಿದೆ, ಇಷ್ಟವಾಯ್ತು, ಜನ ನಮ್ಮ ಸಿನಿಮಾ ನೋಡಿ ಅದರಲ್ಲಿ ಏನಾದರೂ ಆಯ್ಕೆ ಮಾಡಿಕೊಳ್ಳಬೇಕು. ಅಂಥ ಸಿನಿಮಾ ಮಾಡಿ ಎಂದೆ, ನಾವೆಲ್ಲ ಸೇರಿ ಒಳ್ಳೇ ಚಿತ್ರ ಮಾಡುತ್ತಿದ್ದೇವೆ’ ಎಂದರು.
ಶಿಲ್ಪಾ ಶ್ರೀನಿವಾಸ್ ಕೂಡಾ ಮಗನಿಗೆ ಪ್ರೋತ್ಸಾಹ ನೀಡುವಂತೆ ಕೇಳಿಕೊಂಡರು. ನಿರ್ದೇಶಕ ರಾಮು ಮಾತನಾಡಿ, “ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದಾಗಲೇ ಈ ಟೈಟಲ್ ಹೊಳೆದಿತ್ತು, ಮೆಜೆಸ್ಟಿಕ್ ಸಿನಿಮಾ ನನ್ನ ಕನಸು, ಅದೀಗ ನನಸಾಗುತ್ತಿದೆ’ ಎಂದರು.
“ಈ ಕಥೆ, ಟೈಟಲ್ ಹೇಳಿದಾಗ ತುಂಬಾ ಖುಷಿಯಾಯ್ತು. ನಾನು ದರ್ಶನ್ ಅವರ ಅಭಿಮಾನಿ. ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಸಿನಿಮಾ ಲಾಂಚ್ ಆಗ್ತಿದೆ. ಅವರ 1% ಆದರೂ ನಮಗೆ ಬಂದರೆ ಸಾಕು. ಮರಿದಾಸನ ಪಾತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ’ ಎಂದರು. ಚಿತ್ರಕ್ಕೆ ಸಂಹಿತಾ ವಿನ್ಯಾ ನಾಯಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.