ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಕೆ: ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
Team Udayavani, Feb 23, 2024, 11:34 PM IST
ಬೆಂಗಳೂರು: ರಾಜ್ಯ ಸರಕಾರ ಪರಿಶಿಷ್ಟ ಜಾತಿ/ ಪಂಗಡಕ್ಕೆ ಮೀಸಲಾಗಿದ್ದ ಎಸ್ ಸಿ/ಎಸ್ ಟಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ ನೀತಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ಮೈಸೂರು ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ದಲಿತರಿಗೆ ಮೀಸಲಾದ ವಿವಿಧ ಯೋಜನೆಗಳ 14,482 ಕೋ. ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುವ ಮೂಲಕ ಶೋಷಿತ ಸಮುದಾಯಕ್ಕೆ ವಂಚನೆ ಎಸಗಿದೆ ಎಂದು ಆರೋಪಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ರಾಮನಗರದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಸ್ವಲ್ಪ ಹೊತ್ತು ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು. ಮಂಡ್ಯ ನಗರದ ಜಿಲ್ಲಾಧಿ ಕಾರಿ ಕಚೇರಿ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಕೋಲಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಪಾಲ್ಗೊಂಡರು.
ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮಾಜಿ ಶಾಸಕ ಅರುಣ ಶಹಪುರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಶಿರಸಿ ಸಹಿತ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.