Mangaluru ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿರ್ವಾಹಕನಿಗೆ ಶಿಕ್ಷೆ
Team Udayavani, Feb 24, 2024, 12:22 AM IST
ಮಂಗಳೂರು: ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜ ನ್ಯವೆಸಗಿದ ಕೆಎಸ್ಸಾ ರ್ಟಿಸಿ ಬಸ್ ನಿರ್ವಾಹಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಬಾಗಲಕೋಟೆಯ ದಾವಲ್ ಸಾಬ್ (34) ಶಿಕ್ಷೆಗೊಳಗಾದವನು. ಘಟನೆ 2023ರ ಮಾರ್ಚ್‌ನಲ್ಲಿ ನಡೆದಿತ್ತು.
ಪ್ರಕರಣದ ವಿವರ
ಬಾಲಕಿ ಶಾಲೆಯಿಂದ ಬಿ.ಸಿ. ರೋಡ್‌ನಲ್ಲಿನ ತನ್ನ ಮನೆಗೆ ಬರಲು ಕಲ್ಲಡ್ಕದಲ್ಲಿ ಬಸ್ ಹತ್ತಿದ್ದಳು. ಬಸ್‌ನಲ್ಲಿ ನಾಲ್ಕೈದು ಪ್ರಯಾಣಿಕರಷ್ಟೇ ಇದ್ದರು. ಮುಂದಿನ ನಿಲ್ದಾಣದಲ್ಲಿ ಅವರೂ ಇಳಿದರು. ಆಗ ನಿರ್ವಾಹಕ ಬಾಲಕಿ ಬಳಿ ಬಂದು ಅಶ್ಲೀಲವಾಗಿ ವರ್ತಿಸಿದ್ದ. ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಬಾಲಕಿ ಹೇಳಿದರೂ ಆರೋಪಿ ನೀಡಿದ್ದ. ಅಸಭ್ಯ ವರ್ತನೆ ಮುಂದುವರಿಸಿದ್ದ. ಇದರಿಂದ ತೀವ್ರವಾಗಿ ನೊಂದಿದ್ದ ಬಾಲಕಿ ಬಸ್‌ನ ಸಂಖ್ಯೆಯ ಸಮೇತ ಮನೆ ಯಲ್ಲಿ ತಾಯಿ ಬಳಿ ಎಲ್ಲವನ್ನೂ ವಿವರಿಸಿದ್ದಳು. ಬಳಿಕ ತಾಯಿ ಮತ್ತು ಬಾಲಕಿ ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಮಂಗಳೂರಿಗೆ ವಾಪಸು ಹೊರಟಿದ್ದ ಬಸ್‌ನಲ್ಲಿನ ನಿರ್ವಾಹಕನನ್ನು ವಶಕ್ಕೆ ಪಡೆದಿದ್ದರು.
ಇನ್‌ಸ್ಪೆಕ್ಟರ್ ನಂದಿನಿ ಎಸ್. ಶೆಟ್ಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಎಫ್ಟಿಎಸ್‌ಸಿ-1 ಪೋಕ್ಸೋ )ದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಶುಕ್ರವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಒಂದು ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ತಿಂಗಳು ಸಾದಾ ಸಜೆ, ಪೋಕ್ಸೋ ಕಾಯಿದೆಯಡಿ 2 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ದಂಡ ಪಾವತಿಸದಿದ್ದರೆ ಮತ್ತೆ 2 ತಿಂಗಳು ಸಾದಾ ಸಜೆ ವಿಧಿಸಿದ್ದಾರೆ. ಸಂತ್ರಸ್ತೆ ವಿದ್ಯಾರ್ಥಿನಿಗೆ 10,000 ರೂ.ಗಳನ್ನು ಪರಿಹಾರವಾಗಿ ನೀಡು ವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಪ್ರಾಸಿ ಕ್ಯೂಷನ್ ಪರವಾಗಿ ಪೋಕ್ಸೋ ವಿಶೇ ಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.