UCC ಜಾರಿಗೆ ಮುಂದಾದ ಅಸ್ಸಾಂ… ಮುಸ್ಲಿಂ ವಿವಾಹ, ವಿಚ್ಛೇದನ ಕಾಯ್ದೆ ನಿಷೇಧಕ್ಕೆ ನಿರ್ಧಾರ
Team Udayavani, Feb 24, 2024, 8:32 AM IST
ಅಸ್ಸಾಂ: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಇದೀಗ ಅಸ್ಸಾಂ ಕೂಡ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ 1930 ಅನ್ನು ರದ್ದುಗೊಳಿಸಲಾಗಿದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರ ಶುಕ್ರವಾರ (ಫೆ. 24) ರಾತ್ರಿ ಈ ಕಾನೂನನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಶುಕ್ರವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ. ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕಡೆಗೆ ಇದೊಂದು ದೊಡ್ಡ ಹೆಜ್ಜೆ ಎಂದು ಸಂಪುಟ ಸಚಿವ ಜಯಂತ್ ಬರುವಾ ಹೇಳಿದ್ದಾರೆ. ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ನಮ್ಮ ಮುಖ್ಯಮಂತ್ರಿ ಈಗಾಗಲೇ ಘೋಷಿಸಿದ್ದರು. ಅದರ ಮೊದಲ ಭಾಗವಾಗಿ ಇಂದು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.
ಬಾಲ್ಯ ವಿವಾಹ ನಿಷೇಧಿಸಲಾಗುವುದು:
ಮಧ್ಯರಾತ್ರಿಯ ನಂತರ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ನಲ್ಲಿ, “ಫೆಬ್ರವರಿ 23 ರಂದು, ಅಸ್ಸಾಂ ಕ್ಯಾಬಿನೆಟ್ ಹಳೆಯ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಕಾನೂನಿನ ಪ್ರಕಾರ ವಧು ಮತ್ತು ವರರು 18 ಮತ್ತು 21 ರ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ನೀಡುವ ನಿಬಂಧನೆಗಳನ್ನು ಈ ಹಿಂದಿನ ಕಾಯಿದೆ ಒಳಗೊಂಡಿತ್ತು. ಹಾಗಾಗಿ ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ದತಿಯನ್ನು ನಿಷೇಧಿಸುವ ನಿಟ್ಟಿನಲ್ಲಿ ನಾವು ಇಟ್ಟಿರುವ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಜಯಂತ್ ಮಲ್ಲಬರುವಾ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಿಜಿಸ್ಟ್ರಾರ್‌ಗಳು ಈಗ ಹೊಸದಾಗಿ ರಚನೆಯಾದ ಕಾನೂನಿನ ಅಡಿಯಲ್ಲಿ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳನ್ನು ನೋಂದಾಯಿಸುವ ಉಸ್ತುವಾರಿಯನ್ನು ವಹಿಸುತ್ತಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರದ್ದಾದ ಕಾಯಿದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ಸಹ ಅವರ ಹುದ್ದೆಯಿಂದ ಬಿಡುಗಡೆ ಮಾಡಲಾಗುವುದು ಮತ್ತು ಅವರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. 1935 ರ ಹಳೆಯ ಕಾಯಿದೆಯಿಂದ ಹದಿಹರೆಯದವರ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ಸಹಾಯವಾಗಲಿದೆ. ಈ ಕಾನೂನು ಬ್ರಿಟಿಷ್ ಸಾಮ್ರಾಜ್ಯದಿಂದ ಜಾರಿಗೆ ಬಂದಿತು. 18 ವರ್ಷದೊಳಗಿನ ಹೆಣ್ಣು ಮತ್ತು 21 ವರ್ಷದೊಳಗಿನ ವ್ಯಕ್ತಿ ವಿವಾಹವಾಗಬಹುದು ಎಂದು ವ್ಯಾಖ್ಯಾನಿಸಲಾಗಿರುವ ಈ ಕಾಯ್ದೆಯನ್ನು ರದ್ದುಪಡಿಸುವ ಮೂಲಕ ಬಾಲ್ಯ ವಿವಾಹದ ಸಮಸ್ಯೆಯನ್ನು ಪರಿಹರಿಸಲು ನಮ್ಮ ಸರ್ಕಾರ ಬಯಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Daily Horoscope: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು, ಧನಪ್ರಾಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.