Venur Mahamastakabhisheka: ಆಚಾರದಲ್ಲಿ ಅಹಿಂಸೆ, ವಿಚಾರದಲ್ಲಿ ಏಕಾಂತವೇ ಜಿನ ತತ್ತ್ವ

ವೇಣೂರು ಮಹಾಮಸ್ತಕಾಭಿಷೇಕ 2ನೇ ದಿನದ ಧಾರ್ಮಿಕ ಸಭೆ

Team Udayavani, Feb 24, 2024, 9:35 AM IST

2-venur

ಬೆಳ್ತಂಗಡಿ: ಜೈನ ಧರ್ಮ ದಶಧರ್ಮಗಳನ್ನು ಜೀವನದಲ್ಲಿ ಪಾಲಿಸುತ್ತಾ ಬಂದಿರುವ ಧರ್ಮವಾಗಿದೆ. ಆದರೆ ಜಗತ್ತಿನಲ್ಲಿ ಇಂದು ಹಿಂಸೆ, ಅಶಾಂತಿ ತಾಂಡವ ವಾಡುತ್ತಿದೆ. ಹಿಂಸೆಯಿಂದ ಹಿಂಸೆಯನ್ನು ಸರಿಪಡಿಸಲು ಸಾಧ್ಯವಿಲ್ಲ. ಶಾಂತಿಯಿಂದಷ್ಟೆ ಜಯಿಸಬಹುದಾಗಿದೆ. ಜೈನ ಧರ್ಮದಂತೆ ಆಚಾರದಲ್ಲಿ ಅಹಿಂಸೆ ವಿಚಾರದಲ್ಲಿ ಏಕಾಂತವನ್ನು ಪಾಲಿಸಿದರಷ್ಟೆ ಮೌಲ್ಯಾಧಾರಿತ ಬದುಕು ಸಾಧ್ಯ ಎಂದು ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.

ವೇಣೂರಿನ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಎರಡನೇ ದಿನವಾದ ಶುಕ್ರವಾರ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನರಸಿಂಹರಾಜಪುರ ಜೈನಮಠದ ಸ್ವಸ್ತಿಶ್ರೀ ಡಾ| ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಆಶೀರ್ವಚನ ನೀಡಿ, ಬಾಹುಬಲಿ ಸ್ವಾಮಿಯ ಅಭಿಷೇಕ ಪೂಜೆಯನ್ನು ಈ ಯುಗದ ಕಣ್ಣಿನಲ್ಲಿ ಸಾಕ್ಷೀಕರಿಸುವುದೇ ಪಾವನ. ನಾವೆಲ್ಲ ಶುದ್ಧಾಚಾರದಿಂದ ಸೇವೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವ ಶಾಂತಿ ಬಯಸೋಣ ಎಂದರು.

ಮೂಡುಬಿದಿರೆಯ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಮುಕ್ತಿಗಾಗಿ ಭಕ್ತಿರಸದಲ್ಲಿ ಬಾಹುಬಲಿಯ ಸಂದೇಶ ಸಾರೋಣ ಎಂದರು. ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲ, ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್‌, ದಾನಿ ರಾಜೇಂದ್ರ ಕುಮಾರ್‌ ತುಮಕೂರು, ಎಂಆರ್‌ಪಿಎಲ್‌ ಅಧಿಕಾರಿ ಸ್ವಾಮಿಪ್ರಸಾದ್‌, ದೇವಕುಮಾರ್‌ ಕಂಬ್ಳಿ, ಕೋಶಾಧಿಕಾರಿ ಜಯರಾಜ್‌ ಕಾಂಬ್ಳಿ ಉಪಸ್ಥಿತರಿದ್ದರು.

ಮೂಡುಬಿದಿರೆ ಎಕ್ಸಲೆಂಟ್‌ ಶಿಕ್ಷಣ ಸಸಂಸ್ಥೆಗಳ ಆಡಳಿತ ನಿರ್ದೇಶಕ ಡಾ| ಬಿ.ಪಿ. ಸಂಪತ್‌ ಕುಮಾರ್‌ ಅವರು “ಕನ್ನಡ ಕವಿಗಳು ಕಂಡ ಬಾಹುಬಲಿಯ ಚಿತ್ರಣ’ ಉಪನ್ಯಾಸ ನೀಡಿದರು.

ಯುಗಳ ಮುನಿಶ್ರೀ 108 ಅಮೋಘಕೀರ್ತಿ ಮುನಿಮಹಾ ರಾಜರು ಮತ್ತು ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮಹಾರಾಜರು, ಮುಕ್ತಿಶ್ರೀ ಮಾತಾಜಿ, ದಿವ್ಯಶ್ರೀ ಮಾತಾಜಿ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಿತು.

ಸೇವಾಕರ್ತ ಪ್ರವೀಣ್‌ ಕುಮಾರ್‌ ಇಂದ್ರ ಸ್ವಾಗತಿಸಿದರು. ಸತ್ಯಪ್ರಭಾ ವಿ. ಜೈನ್‌ ವಂದಿಸಿದರು. ಶುಭಶ್ರೀ ಜೈನ್‌ ನಿರೂಪಿಸಿದರು.

ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ

ಶುಕ್ರವಾರ ನಿತ್ಯ ವಿಧಿ ಸಹಿತ ಮೃತ್ತಿಕ ಸಂಗ್ರಹಣ, ಅಂಕುರಾರ್ಪಣೆ, ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ ಸಂಜೆ ಬ್ರಹ್ಮಸ್ತಂಭದ ಬ್ರಹ್ಮ ಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆದವು. ಎರಡನೇ ದಿನದ ಸೇವಾಕರ್ತರಾದ ಪ್ರವೀಣ್‌ ಕುಮಾರ್‌ ಇಂದ್ರ ಅವರ ನೇತೃತ್ವದಲ್ಲಿ ಮಧ್ಯಾಹ್ನ ಬಾಹುಬಲಿ ಮೂರ್ತಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಜರಗಿತು. ಸಂಜೆ 7ರಿಂದ ಜಿನದಿಗಂಬರನಿಗೆ 108 ಕಲಷಾಭಿಷೇಕ, ಕ್ಷೀರ, ಎಳನೀರು, ಇಕ್ಷುರಸ, ಗಂಧ, ಚಂದನಾದಿ ಅಷ್ಟಗಂಧಗಳ ದ್ರವ್ಯದ ಮಜ್ಜನ ನೆರವೇರಿತು. ರಾತ್ರಿ ಆಳ್ವಾಸ್‌ ಸಾಂಸ್ಕೃತಿಕ ವೈಭವ, ಸುಗಮಸಂಗೀತ, ರಸಮಂಜರಿ, ನೃತ್ಯಾಂಜಲಿ ರಸದೌತಣ ನೀಡಿತು.

ಇಂದಿನ ಕಾರ್ಯಕ್ರಮ

ಫೆ. 24ರಂದು ಬೆಳಗ್ಗೆ ನಿತ್ಯವಿಧಿ ಸಹಿತ ಶ್ರೀ ಪೀಠ ಯಂತ್ರರಾಧನಾ ವಿಧಾನ, ಧ್ವಜಪೂಜೆ ಶ್ರೀ ಬಲಿ ವಿಧಾನ, ಮಧ್ಯಾಹ್ನ ಭಕ್ತಾಮರ ಯಂತ್ರಾರಾಧನ ವಿಧಾನ, ಅಗ್ರೋದಕ ಮೆರವಣಿಗೆ ಬಳಿಕ 108 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹಾಪೂಜೆ ಹಾಗೂ ಮಂಗಳಾರತಿ ಮೊದಲಾದ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ಅಪರಾಹ್ನ 3ಕ್ಕೆ ಯುಗಳ ಮುನಿಗಳ ಆಶೀರ್ವಚನದೊಂದಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್‌, ಶಾಸಕ ಹರೀಶ್‌ ಪೂಂಜ, ಎಂಎಲ್‌ಸಿ ಮಂಜುನಾಥ ಭಂಡಾರಿ, ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್‌, ಎಚ್‌ಪಿಸಿಎಲ್‌ನ ಡಿಜಿಎಂ ನವೀನ್‌ ಕುಮಾರ್‌ಎಂ.ಜಿ., ಬೆಳಗಾವಿ ಪೊಲೀಸ್‌ ವರಿಷ್ಠಾಧಿಕಾರಿ ಜಿನೇಂದ್ರ ಕಣಗಾವಿ, ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಭಾಗವಹಿಸುವರು. ಜಿನ ಸಿದ್ಧಾಂತದ ಶ್ರೇಷ್ಠತೆ-ಅನೇಕಾಂತವಾದದ ಕುರಿತು ಪತ್ರಕರ್ತ ಅಜಿತ್‌ ಹನುಮಕ್ಕನವರ್‌ ಉಪನ್ಯಾಸ ನೀಡಲಿರುವರು.

ಸಂಜೆ ಅಜಯ್‌ ವಾರಿಯರ್‌ ಮತ್ತು ಬಳಗದವರಿಂದ ಸಂಗೀತಯಾನ, ಭರತನಾಟ್ಯ, ನೃತ್ಯ ಸಂಗಮ ನಡೆಯಲಿದೆ.

ವಾಹನ ಮಾರ್ಗ ಬದಲಾವಣೆ

ಮಂಗಳೂರು: ಮಹಾಮಸ್ತಕಾಭಿಷೇಕ ಸಂದರ್ಭ ಜನದಟ್ಟಣೆಯಿಂದ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇರುವುದರಿಂದ ಮಾ. 1ರ ವರೆಗೆ ಮೂಡುಬಿದಿರೆ ಕಡೆಯಿಂದ ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಬದಲಿ ದಾರಿಯನ್ನು ಸೂಚಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಆದೇಶಿಸಿದ್ದಾರೆ.

ಲಘು ವಾಹನ ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ, ನೈನಾಡು ಮೂಲಕ ಗೋಳಿಯಂಗಡಿ ಆಗಿ ಬೆಳ್ತಂಗಡಿ ರಸ್ತೆಗೆ ಸಂಪರ್ಕಿಸಬೇಕು.

ಬೆಳ್ತಂಗಡಿ ಕಡೆಯಿಂದ ಬಂದು ವೇಣೂರು ಪೇಟೆ ಮುಖಾಂತರ ಮೂಡುಬಿದಿರೆ ಕಡೆಗೆ ಹೋಗುವ ಲಘು ವಾಹನಗಳು ಗೋಳಿಯಂಗಡಿಯಿಂದ ಪಥ ಬದಲಿಸಿ ನೈನಾಡು, ಬಜಿರೆ, ಆರಂಬೋಡಿ, ಪಡ್ಯಾರಬೆಟ್ಟು ಮೂಲಕ ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕು.

ಮೂಡುಬಿದಿರೆಯಿಂದ ಬೆಳ್ತಂಗಡಿಗೆ ಹೋಗುವ ಘನ ವಾಹನ ಮೂಡುಬಿದಿರೆ ಶಿರ್ತಾಡಿ, ನಾರಾವಿ, ಗುರುವಾಯನಕೆರೆ ಮೂಲಕ ಬೆಳ್ತಂಗಡಿ ಕಡೆಗೆ ಹಾಗೂ ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುವ ಘನ ವಾಹನ ಗುರುವಾಯನಕೆರೆ, ನಾರಾವಿ, ಮೂಡುಬಿದಿರೆ ಮೂಲಕ ಸಂಚರಿಸಬೇಕು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.