Dandeli: ಪಿಠೋಪಕರಣಗಳ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ
Team Udayavani, Feb 24, 2024, 2:42 PM IST
ದಾಂಡೇಲಿ: ನಗರದ ಮಾರುತಿ ನಗರದ ಪಿಠೋಪಕರಣಗಳ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ಅಪಾರ ಹಾನಿಯಾದ ಘಟನೆ ಫೆ.24ರ ಶನಿವಾರ ನಸುಕಿನ ವೇಳೆ ನಡೆದಿದೆ.
ಮಾರುತಿ ನಗರದಲ್ಲಿರುವ ಅಬ್ದುಲ್ ಖುದ್ದುಸ್ ಸೈಯದ್ ಆದಂ ಮಾಲಕತ್ವದ ಕಟ್ಟಡದಲ್ಲಿರುವ ಸಚಿನ್ ಸಿದ್ದರಾಯ್ ಮುಚ್ಚಂಡಿಕರ್ ಎಂಬವರ ಕಟ್ಟಿಗೆ ಪಿಠೋಪಕರಣಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಅಂಗಡಿಯೊಳಗಿದ್ದ ಮರದ ಪಿಠೋಪಕರಣಗಳು ಸಂಪೂರ್ಣ ಸುಟ್ಟು ಕರಲಾಗಿದೆ. ಪಿಠೋಪಕರಣಗಳನ್ನು ಸಿದ್ದಪಡಿಸುವ ಯಂತ್ರಗಳು ಕೂಡ ಸುಟ್ಟು ಹೋಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ಘಟನೆ ನಡೆದ ಸ್ವಲ್ಪ ಹೊತ್ತಿನಲ್ಲೇ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಐ.ಆರ್.ಗಡ್ಡೇಕರ್, ಎಎಸ್ಐ ವೆಂಕಟೇಶ್, ಪೊಲೀಸ್ ಸಿಬ್ಬಂದಿಗಳಾದ ಮಹಾದೇವ, ಎಸ್.ಬಳೆಗಾರ, ಶಂಕರ ಗುದ್ದನ್ನವರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.