Belagavi: ಬೃಹತ್ ಸಾರಾಯಿ ಅಡ್ಡೆಗೆ 100ಕ್ಕೂ ಹೆಚ್ಚು ಪೊಲೀಸರಿಂದ ದಾಳಿ
Team Udayavani, Feb 25, 2024, 12:58 AM IST
ಬೆಳಗಾವಿ: ಇಲ್ಲಿಗೆ ಸಮೀಪದ ಸೋನಟ್ಟಿಯ ಗುಡ್ಡಗಾಡು ಪ್ರದೇಶದ ಕಳ್ಳಭಟ್ಟಿ ತಯಾರಿ ಅಡ್ಡೆಗೆ ಶನಿವಾರ 100ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ, ಸುಮಾರು 12 ಲಕ್ಷ ರೂ. ಮೌಲ್ಯದ 5 ಸಾವಿರ ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ.
200 ಲೀಟರ್ ಬೆಲ್ಲದ ಕೊಳೆ ಇರುವ 26 ಬ್ಯಾರೆಲ್, 30 ಲೀಟರ್ ಬೆಲ್ಲದ ಕೊಳೆ ಕಳ್ಳಭಟ್ಟಿಯ 17 ಬ್ಯಾರೆಲ್‌ಗಳಲ್ಲಿದ್ದ ಒಟ್ಟು 5,700 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆಯಲಾಗಿದೆ. ದಂಧೆಕೋರರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಈ ಬಗ್ಗೆ ಸೋನಟ್ಟಿಯ ಸಿದ್ರಾಯಿ ರಾಜಕಟ್ಟಿ, ಶೆಟ್ಟೆವ್ವ ರಾಜಕಟ್ಟಿ, ಸಿದ್ದಪ್ಪ ಪಣಗುದ್ದಿ, ಬಾಳಪ್ಪ ಮುಚ್ಚಂಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್ ಜಗದೀಶ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಭಾಗವಹಿಸಿದ್ದ ಸಿಬಂದಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ.
2011ರಲ್ಲಿ ಇದೇ ಗ್ರಾಮದ ಹೊರವಲಯದಲ್ಲಿರುವ ಕಾರಾವಿ ಗುಡ್ಡದ ಕಳ್ಳಭಟ್ಟಿ ತಯಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದ ಆಗಿನ ಅಬಕಾರಿ ಸಚಿವ ರೇಣುಕಾಚಾರ್ಯ ಸಹಿತ ಪೊಲೀಸರ ಮೇಲೆ ದಂಧೆಕೋರರು ಕಲ್ಲು ತೂರಾಟ ನಡೆಸಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಸಚಿವರು ಸೇರಿ ಎಲ್ಲರೂ ಹರಸಾಹಸ ಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.