Wheeling: 10 ಪ್ರಕರಣ ದಾಖಲು,ಇಬ್ಬರು ಬೈಕ್ ಸವಾರರ ಬಂಧನ
Team Udayavani, Feb 25, 2024, 11:30 AM IST
ಬೆಂಗಳೂರು: ನಗರದಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಪಶ್ಚಿಮ ಮತ್ತು ಪೂರ್ವ ವಿಭಾಗ ಸಂಚಾರ ಪೊಲೀಸರು 10 ಪ್ರತ್ಯೇಕ ಪ್ರಕರಣಗಳನ್ನು ದಾಖಸಿದ್ದಾರೆ.
ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ಮಾಡುವ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 8 ಪ್ರಕರಣ ದಾಖಲಿಸಿದ್ದಾರೆ. ಫೆ.22 ಮತ್ತು 23ರಂದು ನಡೆದ ವಿಶೇಷ ಕಾರ್ಯಾಚರಣೆ ವೇಳೆ ಕೆಂಗೇರಿ 03, ಬ್ಯಾಟರಾಯನಪುರ 02, ಕಾಮಾಕ್ಷಿಪಾಳ್ಯ, ಅಶೋಕನಗರ, ವಿಜಯನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಲಾ 1 ಸೇರಿ ಒಟ್ಟು 8 ಪ್ರಕರಣಗಳನ್ನು ದಾಖಲಿ ಸಲಾ ಗಿದ್ದು, 8 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ವ್ಹೀಲಿಂಗ್ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್ ತಿಳಿಸಿದ್ದಾರೆ.
ಇಬ್ಬರ ಬಂಧನ: ನಗರದ ಸುರಂಜನ್ದಾಸ್ ಮುಖ್ಯರಸ್ತೆಯಲ್ಲಿ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾ ರರನ್ನು ಜೀವನಭೀಮಾನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೋಹಿತ್ ಕುಮಾರ್(21) ಮತ್ತು ವಿಘ್ನೇಶ್(19) ಬಂಧಿತರು. ಫೆ.23ರಂದು ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಸುರಂಜನ್ದಾಸ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರನ್ನು ವಶಕ್ಕೆ ಪಡೆದು, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.