Yellapur; ಬೈಕ್ ಓವರ್ ಟೇಕ್ ವಿಚಾರ: ಕೊಲೆಯಲ್ಲಿ ಅಂತ್ಯವಾದ ಯುವಕರ ಜಗಳ
Team Udayavani, Feb 25, 2024, 3:13 PM IST
ಯಲ್ಲಾಪುರ: ಬೈಕ್ ಓವರ್ ಟೇಕ್ ವಿಚಾರಕ್ಕೆ ಸಂಬಂದಿಸಿದ ಜಗಳ ಅತಿರೇಕಕ್ಕೆ ಹೋಗಿ ಓರ್ವ ಯುವಕನ ಕೊಲೆಯಲ್ಲಿ ಅಂತ್ಯ ಕಂಡ ದುರ್ಘಟನೆ ಯಲ್ಲಾಪುರ ತಾಲೂಕಿನ ಹುಣಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಮೃತ ಯುವಕನನ್ನು ಹಳಿಯಾಳದ ಕಾಮತಿಕೊಪ್ಪದ ಗುಂಡೊಳ್ಳಿಯ ಪ್ರಜ್ವಲ್ ಪ್ರಕಾಶ ಕಕ್ಕೇರಿಕರ್ (24) ಎಂದು ಗುರುತಿಸಲಾಗಿದೆ.
ಹುಣಶೆಟ್ಟಿಕೊಪ್ಪದಲ್ಲಿ ನಡೆಯುತ್ತಿರುವ ಜಾತ್ರೆಯಿಂದ ಮನೆಗೆ ವಾಪಸ್ಸಾಗುವಾಗ ಓವರ್ ಟೇಕ್ ಮಾಡಿ ಮುಂದೆ ಬಂದ ಈತನ ಮೇಲೆ ಸಾಣಾ ಮರಾಠಿ, ಅನಿಕೇತ ಮಿರಾಶಿ, ರಿತೇಶ ಪಾಟೀಲ್, ಪಾಂಡುರಂಗ ಕಳಸೂರಕರ್, ಪ್ರಶಾಂತ ಕಳಸೂರಕರ್, ರೂಪೇಶ, ಸತೀಶ ಇವರ ಗುಂಪು ಅಡ್ಡಗಟ್ಟಿ ಜಗಳ ಶುರುಮಾಡಿ ನಂತರ ಕೊಲೆ ಮಾಡಿದ್ದಾರೆ.
ಈ ಬಗ್ಗೆ ಮೃತನ ಅಣ್ಣ ಉಜ್ವಲ್ ಪ್ರಕಾಶ ಕಕ್ಕೇರಿಕರ್ ಪೋಲಿಸ್ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರತಿಭಟನೆ: ಕೊಲೆಯಾಗಲ್ಪಟ್ಟ ವ್ಯಕ್ತಿ ಸಿದ್ದಿ ಸಮುದಾಯಕ್ಕೆ ಸೇರಿದವನಾಗಿದ್ದು ಈ ಬಗ್ಗೆ ಸಿದ್ದಿ ಸಂಘಟನೆಯ ಪ್ರಮುಖರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಿಪಡಿಸಿದ್ದರಲ್ಲದೇ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕೊಲೆಗಡುಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಹಳಿಯಾಳದ ಸಿದ್ದಿ ಮಹಿಳಾ ಸಂಘದವರು ಇಲ್ಲಿಯ ಠಾಣೆಗೆ ಆಗಮಿಸಿ ಕೊಲೆಗಡುಕರನ್ನು ಅಡಗಿಸಿಡದೆ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕೊಲೆ ಪ್ರಕರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಕೊಲೆಗೆಡುಕರ ರಕ್ಷಣೆಯಾಗುತ್ತಿದೆ ಎಂಬ ಆರೋಪ ಗಟ್ಟಿಯಾಗಿ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.