INDvsENG; ರಾಂಚಿ ಗೆಲುವಿನೊಂದಿಗೆ ಸತತ 17ನೇ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ
Team Udayavani, Feb 26, 2024, 2:08 PM IST
ರಾಂಚಿ: ಶುಭ್ಮನ್ ಗಿಲ್ – ಧ್ರುವ್ ಜುರೆಲ್ ತಾಳ್ಮೆಯ ಆಟದಿಂದ ರಾಂಚಿ ಟೆಸ್ಟ್ ಪಂದ್ಯವನ್ನು ಗೆದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಒಂದು ಪಂದ್ಯ ಬಾಕಿ ಉಳಿದಿರುವಂತೆ ಸರಣಿ ವಶಪಡಿಸಿಕೊಂಡಿದೆ. ಇದರೊಂದಿಗೆ ಭಾರತ ತಂಡವು ತವರಿನಲ್ಲಿ ಸತತ 17ನೇ ಟೆಸ್ಟ್ ಸರಣಿ ಗೆದ್ದುಕೊಂಡಿದೆ.
ಗೆಲುವಿಗೆ 192 ರನ್ ಗುರಿ ಪಡೆದಿದ್ದ ಭಾರತವು ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿತ್ತು. ಸೋಮವಾರ ಆರಂಭದಲ್ಲಿ ವೇಗವಾಗಿ ರನ್ ಗಳಿಸಲಾರಂಭಿಸಿತು. ಆದರೆ ಆ್ಯಂಡರ್ಸನ್ ಹಿಡಿದ ಅದ್ಭುತ ಕ್ಯಾಚ್ ಗೆ ಜೈಸ್ವಾಲ್ ಔಟಾದರು. ಅರ್ಧಶತಕ ಹೊಡೆದ ನಾಯಕ ರೋಹಿತ್ ಔಟಾದಾಗ ತಂಡವು ಹಠಾತ್ ಕುಸಿತ ಕಂಡಿತು.
ಒಂದು ಹಂತದಲ್ಲಿ 120 ರನ್ ಗೆ ಐದು ವಿಕೆಟ್ ಕಳೆದುಕೊಂಡಿತ್ತು. ಬಳಿಕ ಗಿಲ್ ಜೊತೆಯಾದ ಜುರೆಲ್ ಮುರಿಯದ ಆರನೇ ವಿಕೆಟ್ ಗೆ 72 ರನ್ ಜೊತೆಯಾಟವಾಡಿದರು. ಗಿಲ್ ಅಜೇಯ 92 ರನ್ ಗಳಿಸಿದರೆ, ಜುರೆಲ್ ಅಜೇಯ 39 ರನ್ ಮಾಡಿದರು. ಭಾರತವು ಐದು ವಿಕೆಟ್ ಅಂತರದ ಗೆಲುವು ಸಾಧಿಸಿತು.
ಬೆನ್ ಸ್ಟೋಕ್ಸ್ ಮತ್ತು ಬ್ರೆಂಡನ್ ಮೆಕಲಮ್ ನಾಯಕತ್ವದಲ್ಲಿ ಇಂಗ್ಲೆಂಡ್‌ಗೆ ಇದು ಮೊದಲ ಸರಣಿ ಸೋಲು. ಅಲ್ಲದೆ, ಸತತ ಮೂರು ಟೆಸ್ಟ್‌ಗಳಲ್ಲಿ ಸೋತಿರುವುದು ಇದೇ ಮೊದಲಾಗಿದೆ.
ಸಂಕ್ಷಿಪ್ತ ಸ್ಕೋರ್
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 353 ರನ್, ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 307 ರನ್.
ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ ನಲ್ಲಿ 145 ರನ್ ಮತ್ತು ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ನಷ್ಟಕ್ಕೆ 192
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.