Child Marriage: ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಲ್ಲ…: ಅಸ್ಸಾಂ ಸಿಎಂ
Team Udayavani, Feb 26, 2024, 1:23 PM IST
ಅಸ್ಸಾಂ: ಬಾಲ್ಯವಿವಾಹದ ಬಗ್ಗೆ ಅಸ್ಸಾಂ ವಿಧಾನಸಭೆಯಲ್ಲಿ ಸೋಮವಾರ ಚರ್ಚೆಚರ್ಚೆ ಮಾಡಲಾಗಿದ್ದು, ಚರ್ಚೆಯ ವೇಳೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಶರ್ಮಾ, ‘ನನ್ನ ಮಾತನ್ನು ಎಚ್ಚರಿಕೆಯಿಂದ ಆಲಿಸಿ, ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ. ಸದನದಲ್ಲಿಯೇ ವಿಪಕ್ಷಗಳಿಗೆ ಸವಾಲು ಹಾಕಿದ ಮುಖ್ಯಮಂತ್ರಿ, 2026ರ ಮೊದಲು ನೀವು ತೆರೆದಿರುವ ಅಂಗಡಿಯನ್ನು ಮುಚ್ಚುತ್ತೇನೆ ಎಂದು ಕಾಂಗ್ರೆಸ್ ಸವಾಲು ಹಾಕಿದ್ದಾರೆ.
ಸದನದಲ್ಲಿ ಪ್ರತಿಪಕ್ಷಗಳ ವಿರುದ್ಧ ಸಿಟ್ಟಿಗೆದ್ದ ಸಿಎಂ ಶರ್ಮಾ ಅವರು ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದ್ದಾರೆ ‘ಕಾಂಗ್ರೆಸ್ ನವರು ನಾನು ಹೇಳಿದ್ದು ಕೇಳಬೇಕು, ನಾನು ಹಿಮಂತ ಬಿಸ್ವ ಶರ್ಮಾ ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳನ್ನು ನಾಶ ಮಾಡಲು ನೀವು ತೆರೆದಿರುವ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚುವವರೆಗೂ ನಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ವಾಸ್ತವವಾಗಿ, ಅಸ್ಸಾಂ ಸರ್ಕಾರವು ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ರದ್ದುಗೊಳಿಸಿದೆ. ಶುಕ್ರವಾರ ತಡರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ‘ಫೆಬ್ರವರಿ 23 ರಂದು, ಅಸ್ಸಾಂ ಕ್ಯಾಬಿನೆಟ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು ಮತ್ತು ವರ್ಷಗಳ ಹಳೆಯ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ಹಿಂತೆಗೆದುಕೊಂಡಿತು.
ಇದನ್ನೂ ಓದಿ: ‘Akbar-Sita’ Lions Row: ಉನ್ನತ ಅಧಿಕಾರಿಯನ್ನು ಅಮಾನತುಗೊಳಿಸಿದ ತ್ರಿಪುರಾ ಸರ್ಕಾರ
कांग्रेस के लोग सुन लें, जब तक मैं, हिमंत बिस्वा सरमा ज़िंदा हूं, तब तक असम में छोटी बच्चियों का विवाह नहीं होने दूँगा। आप लोगों ने मुस्लिम समुदाय की बेटियों को बर्बाद करने की जो दुकान खोली है उन्हें पूरी तरह से बंद किए बिना हम चैन से नहीं बैठेंगे। pic.twitter.com/3yXLi4C23o
— Himanta Biswa Sarma (@himantabiswa) February 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.