Lok Sabha Election 2024:ಸಂಜಯ್ ಗಾಂಧಿ ಜಯ ಸಾಧಿಸಿದ್ದ ಅಮೇಠಿಯಿಂದ ವರುಣ್ ಗಾಂಧಿ ಕಣಕ್ಕೆ?
ಪ್ರಿಯಾಂಕಾ ಗಾಂಧಿ ಕೂಡಾ ಅಮೇಠಿ ಬದಲು ರಾಯ್ ಬರೇಲಿಯಲ್ಲಿ ಸ್ಪರ್ಧಿಸುವ ಸಾಧ್ಯತೆ
Team Udayavani, Feb 26, 2024, 1:38 PM IST
ಅಮೇಠಿ: ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಅಮೇಠಿಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವರುಣ್ ಗಾಂಧಿ ಚಿತ್ತ ಹರಿಸಿರುವುದಾಗಿ ಐಎಎನ್ ಎಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇದನ್ನೂ ಓದಿ:Child Marriage: ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಲ್ಲ…: ಅಸ್ಸಾಂ ಸಿಎಂ
ಈ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೇಠಿಯಲ್ಲಿ ರಾಹುಲ್ ಗಾಂಧಿ ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.
2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪರಾಜಯಗೊಂಡಿದ್ದು, ಈ ಮೂಲಕ ಅಮೇಠಿ ಗಾಂಧಿ ಕುಟುಂಬದ ಕೈತಪ್ಪಿದಂತಾಗಿತ್ತು.
ರಾಹುಲ್ ಗಾಂಧಿ ಈಗ ಕೇರಳದ ವಯನಾಡ್ ಸಂಸದ. ಒಂದು ವೇಳೆ ವರದಿಯ ಮಾಹಿತಿಯ ಆಧಾರದ ಮೇಲೆ ಹೇಳುವುದಾದರೆ, ರಾಹುಲ್ ಗಾಂಧಿ ವಯನಾಡ್ ನಿಂದಲೇ ಸ್ಪರ್ಧಿಸಲು ಹೆಚ್ಚು ಒಲವು ಹೊಂದಿದ್ದಾರೆನ್ನಲಾಗಿದೆ. ಮತ್ತೊಂದೆಡೆ ಪ್ರಿಯಾಂಕಾ ಗಾಂಧಿ ಕೂಡಾ ಅಮೇಠಿ ಬದಲು ರಾಯ್ ಬರೇಲಿಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕ್ಷೇತ್ರದ ಜನರಿಗೆ ಬಹಿರಂಗಪತ್ರ ಬರೆದಿದ್ದರು. ನೀವು ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಂತಿದ್ದೀರಿ ಎಂಬುದು ಗೊತ್ತು ಎಂಬುದಾಗಿ ಸೋನಿಯಾ ಪತ್ರದಲ್ಲಿ ತಿಳಿಸಿದ್ದರು.
ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಗಾಂಧಿ ಕುಟುಂಬದ ರಾಜಕೀಯ ಜೀವನ ಆರಂಭವಾಗಿರುವ ಕುರಿತು ಹಿರಿಯ ಕಾಂಗ್ರೆಸ್ ಮುಖಂಡ ರಾಮ್ ಕರಣ್ ಸಿಂಗ್ ಮಾತನಾಡಿ, 1980ರಲ್ಲಿ ಸಂಜಯ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಮೇಠಿ ಮತ್ತು ಗಾಂಧಿ ಕುಟುಂಬದ ನಡುವೆ ಸಂಬಂಧ ಬೆಳೆದಿತ್ತು ಎಂದು ತಿಳಿಸಿದರು.
ಒಂದು ವೇಳೆ ರಾಹುಲ್ ಗಾಂಧಿ ಅಮೇಠಿಯಿಂದ ಸ್ಪರ್ಧಿಸಲು ನಿರಾಕರಿಸಿದರೆ, ವರುಣ್ ಗಾಂಧಿ ಅಮೇಠಿಯಿಂದ ಸ್ಪರ್ಧಿಸುವ ಸಾಧ್ಯತೆ ಇದ್ದಿರುವುದಾಗಿ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.