Rajya Sabha Elections; ತೊಡೆ ತಟ್ಟಿ ತೋಳೇರಿಸಿದ್ದವರು ಹೂಗುಚ್ಛ ವಿನಿಮಯಿಸಿಕೊಂಡರು!
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಂದಾದ ರೆಡ್ಡಿ -ಸಿದ್ದರಾಮಯ್ಯ
Team Udayavani, Feb 27, 2024, 12:19 AM IST
ಬೆಂಗಳೂರು: ಒಂದು ಕಾಲದಲ್ಲಿ ಪರಮ ಶತ್ರುಗಳಂತಿದ್ದ ಜನಾರ್ದನ ರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಒಂದಾಗಿದ್ದು, ಪರಸ್ಪರ ತೊಡೆ ತಟ್ಟಿ ತೋಳೇರಿಸಿದ್ದವರು ಇಂದು ಹೂಗುಚ್ಛ ವಿನಿಮಯ ಮಾಡಿಕೊಂಡಿದ್ದಾರೆ.
2008ರಲ್ಲಿ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆಪರೇಷನ್ ಕಮಲದ ಆರೋಪ ಹೊರಿಸಿದ್ದ ಅಂದಿನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖಾ ವರದಿ ಇಟ್ಟುಕೊಂಡು ಅಂದಿನ ಸಿಎಂ ಯಡಿಯೂರಪ್ಪ ಹಾಗೂ ಅವರ ಸಂಪುಟದಲ್ಲೇ ಸಚಿವರಾಗಿದ್ದ ಜನಾರ್ದನ ರೆಡ್ಡಿ ವಿರುದ್ಧ ತೋಳೇರಿಸಿದ್ದರು. ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ನಡೆಸಿ, ಅಧಿಕಾರದಿಂದ ಕೆಳಗಿಳಿಸಿ ತೊಡೆ ತಟ್ಟಿದ್ದರು. ಈ ಹೋರಾಟದ ಪ್ರತಿಫಲವಾಗಿ ಜನಾರ್ದನ ರೆಡ್ಡಿ 10 ವರ್ಷಗಳ ಕಾಲ ಬಳ್ಳಾರಿಗೆ ಕಾಲಿಡದಂತಾಗಿತ್ತು. ಸಾಲದ್ದಕ್ಕೆ ಇಂದಿಗೂ ಪ್ರಕರಣದ ಪರಿಣಾಮಗಳನ್ನು ಅವರು ಎದುರಿಸುತ್ತಲೇ ಇದ್ದಾರೆ. ಅಂತೆಯೇ ಇಂದು ಕ್ರೀಡಾ ಸಚಿವರಾಗಿರುವ ಬಿ. ನಾಗೇಂದ್ರ ಅವರೂ ಈ ಪರಿಣಾಮಗಳಿಂದ ಹೊರತಾಗಿಲ್ಲ. ಈಗ ಅವರಲ್ಲಿ ಒಬ್ಬರು ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆದಿದ್ದರೆ, ಮತ್ತೂಬ್ಬರು ರಾಜ್ಯಸಭೆ ಚುನಾವಣೆಗಾಗಿ ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ.
ರಾಜಕೀಯ ಏಳುಬೀಳುಗಳ ಬಳಿಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದ ಜರ್ನಾದನ ರೆಡ್ಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರೇ ಮತದಾರರಾಗಿರುವುದರಿಂದ ಪ್ರತಿ ಮತಕ್ಕೂ ಮೌಲ್ಯವಿದೆ. ಹೀಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನಾರ್ದನ ರೆಡ್ಡಿ ಮನವೊಲಿಸಿ ಸಿಎಂ ಮುಂದೆ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರ ಫಲವಾಗಿ ಕೆಆರ್‌ಪಿಪಿ ಪಕ್ಷದ ಏಜೆಂಟ್ ಆಗಿ ಡಿಸಿಎಂ ಶಿವಕುಮಾರ್ ಅವರ ಪರಮಾಪ್ತರನ್ನೇ ನೇಮಿಸಿದ್ದು, ರೆಡ್ಡಿ ಮತ ಕಾಂಗ್ರೆಸ್‌ಗೇ ಬೀಳುವುದು ಖಚಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.