Arrested: ದರೋಡೆಗೆ ಸಂಚು; ನಾಲ್ವರ ಬಂಧನ, ಮಾರಕಾಸ್ತ್ರ ವಶಕ್ಕೆ
Team Udayavani, Feb 27, 2024, 3:47 PM IST
ಬೀದರ್: ಭಾಲ್ಕಿ ತಾಲೂಕಿನ ಕುರುಬಖೇಳಗಿ ಗ್ರಾಮ ವ್ಯಾಪ್ತಿಯ ಧರಿಸಿದ್ದೇಶ್ವರ ಮಂದಿರ ಬಳಿ ಸೋಮವಾರ ಮಧ್ಯರಾತ್ರಿ ದರೋಡೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿತರನ್ನು ಜಿಲ್ಲಾ ಪೊಲೀಸರು ಬಂಧಿಸಿ, ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಓರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.
ಭಾಲ್ಕಿ ಮತ್ತು ಹುಮನಾಬಾದ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರಯಾಣಿಕರನ್ನು ಮಾರಕಾಸ್ತ್ರಗಳಿಂದ ಹೆದರಿಸಿ, ಅವರಿಂದ ಹಣ ಮತ್ತು ಬೆಳೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಐದು ಜನರ ತಂಡ ಸಂಚು ರೂಪಿಸಿತ್ತು. ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತಿನಲ್ಲಿದ್ದ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ದರೋಡೆ ಸಂಚನ್ನು ವಿಫಲಗೊಳಿಸಿದ್ದಾರೆ.
ಆರೋಪಿತಗಳಿಂದ ಮಾರಕಾಸ್ತ್ರ ಜತೆಗೆ ಖಾರದ ಪುಡಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ. ಖಟಕಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಮೇಲೆ ಈಗಾಗಲೇ ಮಾರಣಾಂತಿಕ ಹಲ್ಲೆ, ಸುಲಿಗೆ, ಮನೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ತಲೆ ಮರೆಸಿಕೊಂಡ ಆರೋಪಿತನ ಮೇಲೆ ಈಗಾಗಲೇ ಗೂಂಡಾ ಕಾಯ್ದೆಯಡಿ ಕಳೆದ ವರ್ಷ ಕ್ರಮ ಕೈಗೊಳ್ಳಲಾಗಿತ್ತು ಎಂದು ತಿಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಡಕಾಯತಿ ಸಂಚು ವಿಫಲಗೊಳಿಸಿದ ಪೊಲೀಸ್ ಅದಿಕಾರಿ ಮತ್ತು ತಂಡದ ಕೆಲಸವನ್ನು ಪ್ರಶಂಸಿಸಿ ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.