Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Team Udayavani, Feb 27, 2024, 9:11 PM IST

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ನಾಲ್ವರ ಕೊಲೆ ಆರೋಪಿ ದೋಷಮುಕ್ತ
ಕಾಸರಗೋಡು: ಪೈವಳಿಕೆ ಕನ್ಯಾಲದ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ ಉದಯ ಕುಮಾರ್‌(44) ನನ್ನು ಕಾಸರಗೋಡು ಅಡಿಶನಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (3) ಖುಲಾಸೆಗೊಳಿಸಿದೆ. ಮಾನಸಿಕ ಅಸ್ವಾಸ್ಥ್ಯದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿದ್ದು, ಮಾನಸಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲು ತೀರ್ಪಿನಲ್ಲಿ ತಿಳಿಸಿದೆ.

2020 ಆ. 3ರಂದು ಸಂಜೆ ಬಾಬು ಅಡಿಗ (70), ವಿಟು (65), ಸದಾಶಿವ (58) ಮತ್ತು ದೇವಕಿ (50) ಅವರನ್ನು ಕೊಲೆಗೈಯಲಾಗಿತ್ತು.

ಬೈಕ್‌ ಕಳವು
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದ ಹೊರಗಡೆ ನಿಲುಗಡೆಗೊಳಿಸಿದ ಮಲಪ್ಪುರಂ ನಿವಾಸಿ ಹಾಗೂ ಚೆಮ್ನಾಡ್‌ ಮೇಲ್ಪರಂಬದ ಸಂಸ್ಥೆಯೊಂದರಲ್ಲಿ ದುಡಿಯುತ್ತಿರುವ ಸಿರಾಜ್‌ ಅವರ ಬೈಕ್‌ನ್ನು ಕಳವು ಮಾಡಲಾಗಿದೆ. ಈ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ.

ಮದ್ಯ ಸಹಿತ ಸ್ಕೂಟರ್‌ ವಶಕ್ಕೆ
ಕಾಸರಗೋಡು: ನಗರದ ಬೀರಂತಬೈಲ್‌ ಲಕ್ಷಿ$¾àವೆಂಕಟೇಶ ರಸ್ತೆ ಬಳಿ ಕಾಸರಗೋಡು ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 6.12 ಲೀಟರ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅಡ್ಕತ್ತಬೈಲ್‌ ಅರ್ಜಾಲ್‌ ಹೌಸ್‌ನ ಅನಿಲ್‌ ಕುಮಾರ್‌ ವಿರುದ್ಧ ಕೇಸು ದಾಖಲಿಸಿದೆ.

ಹಲ್ಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ
ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದಲ್ಲಿ ಮೇಲ್ಪರಂಬ ನಿವಾಸಿ ಉಬೈದ್‌ (52) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಬಂಧಿಸಿದ ಉಪ್ಪಳ ಕೋಡಿಬೈಲು ನಿಯಾಸ್‌ ಮಂಜಿಲ್‌ನ ನಿಯಾಸ್‌ (33) ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಟ್ಕಾ ದಂಧೆ: ಬಂಧನ
ಕಾಸರಗೋಡು: ಪಾಡಿ ಗ್ರಾಮದ ಎಡನೀರು ಬಸ್‌ ನಿಲ್ದಾಣ ಪರಿಸರದಲ್ಲಿ ಮಟ್ಕಾ ದಂಧೆಯಲ್ಲಿ ನಿರತನಾಗಿದ್ದ ಎಡನೀರಿನ ಕೆ. ಕಮಲಾಕ್ಷ (56)ನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಈತನಿಂದ 1,080 ರೂ. ವಶಪಡಿಸಿಕೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ವಶಕ್ಕೆ
ಕುಂಬಳೆ: ಟಿಪ್ಪರ್‌ ಲಾರಿಯಲ್ಲಿ ಸಾಗಿಸುತ್ತಿದ್ದ ಮರಳನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಟಿಪ್ಪರ್‌ ಮಾಲಕ ವಳಯಂ ಕೆ.ಕೆ. ಹೌಸಿನ ಆಲಿಕುಂಞಿ (36) ಮತ್ತು ಚಾಲಕ ಕರ್ನಾಟಕ ನಿವಾಸಿ, ಬಾಯಾರಿನಲ್ಲಿ ವಾಸಿಸುವ ಅಬ್ದುಲ್‌ ಮುನೀರ್‌ (23) ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

lovers

Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

Thief

Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.