ಪತಂಜಲಿ ಸುಳ್ಳು ಜಾಹೀರಾತು ಪ್ರಕರಣ: ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆಯೇ?: ಸುಪ್ರೀಂ
Team Udayavani, Feb 27, 2024, 11:01 PM IST
ನವದೆಹಲಿ: ಸುಳ್ಳು ಹಾಗೂ ಹಾದಿತಪ್ಪಿಸುವ ಜಾಹೀರಾತು ಪ್ರಕಟಿಸುತ್ತಿರುವ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರದಲ್ಲಿ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಯೋಗಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆ ಹಲವು ತಪ್ಪು ಮಾಹಿತಿಗಳಿಂದ ಕೂಡಿದ ಜಾಹೀರಾತುಗಳನ್ನು ನೀಡಬಾರದು ಎಂದು ಕಳೆದ ವರ್ಷದ ನವೆಂಬರ್ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಸಂಸ್ಥೆಗೆ ಎಚ್ಚರಿಕೆ ನೀಡಲಾಗಿತ್ತು. ಇದರ ಹೊರತಾಗಿಯೂ ಕೆಲ ಕಾಯಿಲೆಗಳನ್ನು ಗುಣಪಡಿಸುವ ಬಗ್ಗೆ ಮತ್ತು ಆಲೋಪತಿ ವೈದ್ಯ ಪದ್ಧತಿಯ ಬಗ್ಗೆ ಪದೇ ಪದೆ ತಪ್ಪು ಮಾಹಿತಿಗಳಿಂದ ಕೂಡಿದ ಜಾಹೀರಾತುಗಳನ್ನು ಸಂಸ್ಥೆ ನೀಡುತ್ತಿರುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ.
“ಯೋಗವನ್ನು ಜನಪ್ರಿಯಗೊಳಿಸಿದ ಯೋಗ ಗುರು ರಾಮ್ದೇವ್ ಬಗ್ಗೆ ಗೌರವ ಇದೆ. ಹಾಗೆಂದ ಮಾತ್ರಕ್ಕೆ ಅವರು ಮತ್ತೂಂದು ವೈದ್ಯ ಪದ್ಧತಿ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ಸಹಿಸಲಾಗದು’ ಎಂದಿದೆ. ಜತೆಗೆ, ಈ ಕೂಡಲೇ ಅಂಥ ಜಾಹೀರಾತುಗಳ ಪ್ರಸಾರ ಸ್ಥಗಿತಗೊಳಿಸುವಂತೆಯೂ ಸೂಚಿಸಿದೆ.
ಇದನ್ನೂ ಓದಿ: Lok Sabha Election: ದೆಹಲಿಯ 4, ಹರ್ಯಾಣದ 1 ಕ್ಷೇತ್ರಕ್ಕೆ ಆಪ್ ಅಭ್ಯರ್ಥಿಗಳ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.