Thirthahalli: ಹೊಸ ತುಂಗಾ ಸೇತುವೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ; ಮೂವರ ವಿರುದ್ಧ ಕೇಸ್
Team Udayavani, Feb 28, 2024, 3:09 PM IST
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರ ಕುರುವಳ್ಳಿಯಿಂದ 169 (ಎ) ಬಾಳೆಬೈಲುವಿಗೆ ಸಂಪರ್ಕ ಕಲ್ಪಿಸುವ ನೂತನ ತುಂಗಾ ಸೇತುವೆಯನ್ನು ನಿರ್ಮಿಸಲಾಗಿದ್ದು, ಸೇತುವೆ ನೋಡಲು ಪ್ರವಾಸಿಗರು ಮತ್ತು ವಾಯುವಿಹಾರ ಮಾಡುವ ಸ್ಥಳೀಯರು ಕುಟುಂಬ ಸಮೇತರಾಗಿ ಈ ಸೇತುವೆ ಬಳಿ ಬರುತ್ತಾರೆ.
ಆದರೆ ಈ ಸ್ಥಳದಲ್ಲಿ ಕೆಲ ಪುಂಡರ ಹಾವಳಿ ಜೋರಾಗಿದ್ದು ಬೈಕ್ ವೇಗವಾಗಿ ಚಲಾಯಿಸುವುದು, ಪಾರ್ಟಿ ಮಾಡುವುದು, ಫೋಟೋ ತೆಗೆಯುವ ದೃಷ್ಟಿಯಿಂದ ಇತರರಿಗೆ ತೊಂದರೆ ಕೊಡುವುದು, ಹೀಗೆ ಹಲವು ವಿಷಯಗಳನ್ನು ಸ್ಥಳೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದವು.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರು ಕೆಲ ದಿನಗಳ ಹಿಂದೆ ದಿಡೀರ್ ಕಾರ್ಯಾಚರಣೆ ನಡೆಸಿ ಕೆಲ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡಿದ್ದರು.
ಆದರೆ ಇದೀಗ ಮತ್ತೆ ಸೇತುವೆಯ ಮೇಲೆ ಮಧ್ಯಪಾನ ಸೇವಿಸಿ ಬೈಕ್ ಚಲಾವಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂರು ಜನರ ಮೇಲೆ ಕೇಸ್ ದಾಖಲು ಮಾಡಿ ಎರಡು ಬೈಕುಗಳನ್ನು ವಶಪಡಿಸಿಕೊಂಡಿದ್ದು ಡಿವೈಎಸ್ಪಿ ಅವರ ಈ ದಿಡೀರ್ ಕಾರ್ಯಾಚರಣೆಗೆ ಪಟ್ಟಣದ ಸಾರ್ವಜನಿಕರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.