Uppinangady ಮಾದಕ ದ್ರವ್ಯ ಸೇವನೆ ಪ್ರಕರಣ: ನಾಲ್ವರ ಸೆರೆ
Team Udayavani, Feb 28, 2024, 9:45 PM IST
ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಫೆ. 26ರಂದು ಬೆಳಗ್ಗೆ 34 ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಸವಣೂರು ಗ್ರಾಮದ ಪಿ. ಹನೀಫ್ (45) ಹಾಗೂ ಮುಹಮ್ಮದ್ ಶಾಫಿ (27)ಯನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.
ಮತ್ತೊಂದು ಪ್ರಕರಣದಲ್ಲಿ ಫೆ.26ರಂದು ಬೆಳಗ್ಗೆ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸವಣೂರು ಗ್ರಾಮದ ನವಾಝ್ ಮಾಂತೂರು (35) ಹಾಗೂ ಪ್ರಮೋದ್ ಕೆ. ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿರುವುದು ಕಂಡು ಬಂದಿದ್ದು, ಇವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ನವಾಝ್ ಮಾಂತೂರು ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.