Jobs; ಮುಂದಿನ ದಿನಗಳಲ್ಲಿ ರಾಜ್ಯದ 3 ಕಡೆ ಉದ್ಯೋಗ ಮೇಳ
ಫೆ.27 ರ ಯುವ ಸಮೃದ್ಧಿ ಸಮ್ಮೇಳನದಲ್ಲಿ 9,651 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ
Team Udayavani, Feb 29, 2024, 6:05 AM IST
ಬೆಂಗಳೂರು: ರಾಜಧಾನಿಯಲ್ಲಿ ಸರಕಾರ ಆಯೋಜಿಸಿದ್ದ ಉದ್ಯೋಗ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ವಿಭಾಗವಾರು ಮೈಸೂರು, ಕಲಬುರಗಿ ಹಾಗೂ ಬೆಳಗಾವಿಯಲ್ಲೂ ನಡೆಸಲಾಗುವುದು ಎಂದು ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಹೇಳಿದರು.
ವಿಕಾಸಸೌಧದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ರಾಜ್ಯ ರಾಜಧಾನಿಯಲ್ಲಿ ಫೆ.26 ಮತ್ತು ಫೆ.27 ರಂದು ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ. ಮೇಳದಲ್ಲಿ 53,913 ಪುರುಷರು, 32,494 ಮಹಿಳೆಯರು, ಇತರ 42 ಮಂದಿ ಸಹಿತ 86,451 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 44,527 ಅಭ್ಯರ್ಥಿಗಳು ಹಾಜರಾಗಿದ್ದರು. ಆದರೆ ಸ್ಥಳದಲ್ಲೇ ನೋಂದಣಿ ಮಾಡಿಕೊಂಡವರ ಸಮಗ್ರ ಮಾಹಿತಿ ಕ್ರೋಢೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನಷ್ಟು ಸಂಖ್ಯೆ ಹೆಚ್ಚಳವಾಗಲಿದೆ ಎಂದರು.
16,865 ಅರ್ಜಿಗಳು ಮುಂದಿನ ಹಂತದ ಪರಿಗಣನೆಯಲ್ಲಿದೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳ ಮಾಹಿತಿಯನ್ನು ಉದ್ಯೋಗದಾತ ಕಂಪೆನಿಗಳು ಇನ್ನಷ್ಟೆ ನೀಡಬೇಕಿವೆ ಎಂದರು.
ಎಸೆಸೆಲ್ಸಿಗಿಂತ ಕಡಿಮೆ ಓದಿದ 2,402, ಎಸೆಸೆಲ್ಸಿ 4,376, ಐಟಿಐ 6,584, ಡಿಪ್ಲೊಮಾ 6,449, ಪದವಿ 23,750, ಪಿಯುಸಿ 10,500, ಎಂಜಿನಿಯರಿಂಗ್ 19,721, ಮಾಸ್ಟರ್ ಆಫ್ ಟೆಕ್ನಾಲಜಿ 855, ಸ್ನಾತಕೋತ್ತರ ಪದವಿ 11,809 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು ನಗರದಿಂದ 18,644 ಮಂದಿ, ಧಾರವಾಡ 5,802, ಬಳ್ಳಾರಿ 5,229, ಕಲಬುರಗಿಯಿಂದ 3,339 ಮಂದಿ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯಗಳ ಅಭ್ಯರ್ಥಿಗಳೂ ಭಾಗಿಯಾಗಿದ್ದರು ಎಂದರು.
ಸಮ್ಮೇಳನದಲ್ಲಿ ವೈಮಾನಿಕ ಮತ್ತು ನಾಗರಿಕ ವಲಯದಿಂದ 26, ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಬಿಎಫ್ಎಸ್‌ಐ ವಲಯ 91, ಐಟಿ-ಐಟಿಎಸ್‌ಐ ವಲಯ 80, ಮೂಲಭೂತ ಉಪಕರಣಗಳ ವಲಯ 1 ಸಹಿತ ಒಟ್ಟು 598 ಕಂಪೆನಿಗಳು ಪಾಲ್ಗೊಂಡಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕಿ ಎಂ.ಕನಗವಲ್ಲಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಸಿ.ಆರ್. ಕೃಷ್ಣ ಕುಮಾರ್ ಉಪಸ್ಥಿತರಿದ್ದರು.
ಐಬಿಎಂನಿಂದ 5 ಲಕ್ಷ ಮಂದಿಗೆ ತರಬೇತಿ
ಯುವ ಜನಾಂಗವನ್ನು ಉದ್ಯಮಶೀಲತೆಯಲ್ಲಿ ತೊಡಗಿಸಿಕೊಳ್ಳಲು ಕಲಿಕೆ ಜತೆ ಕೌಶಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪದವಿ ಅಥವಾ ಇನ್ನಿತರ ಕೋರ್ಸ್ ಓದುವಾಗಲೇ ಔದ್ಯೋಗಿಕ ಕ್ಷೇತ್ರಗಳಲ್ಲಿ ಬೇಕಾದ ಕೌಶಲಗಳನ್ನು° ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದೇ ಯೋಜನೆಯ ಉದ್ದೇಶವಾಗಿದೆ. ಈಗಾಗಲೇ 73 ಕಂಪೆನಿಗಳು ಮುಂದೆ ಬಂದಿವೆ. ಇದರ ಜತೆಗೆ ಉದ್ಯೋಗದ ತರಬೇತಿ ನೀಡಲು ಉದ್ದಿಮೆಗಳ ಜತೆ ಮಾತುಕತೆ ನಡೆಸಲಾಗಿದೆ. ಕೌಶಲ ಅಭಿವೃದ್ಧಿ ನಿಗಮದ ಜಾಲತಾಣದಲ್ಲಿ ನೋಂದಾಯಿಸಲಾದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಕೆಲಸ ನೀಡುವ ಹೊಣೆಗಾರಿಕೆ ಕಂಪೆನಿಗಳು ವಹಿಸಿಕೊಂಡಿದ್ದು, ಈಗಾಗಲೇ ಸುಮಾರು 40 ಕಂಪೆನಿಗಳು ಮುಂದೆ ಬಂದಿವೆ. ಐಬಿಎಂ ಕಂಪೆನಿ 5 ಲಕ್ಷ ಮಂದಿಗೆ ತರಬೇತಿ ನೀಡಲು ಮುಂದೆ ಬಂದಿದೆ ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಸಾಗರೋತ್ತರ ಕಂಪೆನಿ ಪ್ರಾರಂಭ
ವಿದೇಶಿ ಕಂಪೆನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ ಸರಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪೆನಿ ಪ್ರಾರಂಭಿಸಲಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.