Mysore: ರಾಷ್ಟ್ರೀಯ ಸಂಸ್ಕೃತ ಭಾಷಣ ಸ್ಪರ್ಧೆಗೆ ಕೃಷ್ಣ ಬಾದರಾಯಣ ಆಯ್ಕೆ
ಕರ್ನಾಟಕ ಸಂಸ್ಕೃತ ವಿವಿಯಲ್ಲಿ ಪ್ರಥಮ ಬಹುಮಾನ ವಿಜೇತ
Team Udayavani, Feb 29, 2024, 11:48 AM IST
ಮೈಸೂರು: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ 61ನೇ ಅಖಿಲ ಕರ್ನಾಟಕ ಸಂಸ್ಕೃತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಕೃಷ್ಣ ಪಿ. ಬಾದರಾಯಣ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಅಯೋಧ್ಯೆಯಲ್ಲಿ ಮಾ. 18ರಂದು ಕೇಂದ್ರೀಯ ಸಂಸ್ಕೃತ ವಿವಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ್ದು ಈತ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ವಿಶೇಷ.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್‌ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡುತ್ತಿರುವ ಕೃಷ್ಣ ಬಾದರಾಯಣ ‘ಭಾರತೀಯ ಪುರಾತನ ವಿಜ್ಞಾನ (ರಸಾಯನ ಶಾಸ್ತ್ರ)ದ ಮಹತ್ವ’ ಎಂಬ ವಿಷಯದ ಬಗ್ಗೆ ಸಂಸ್ಕೃತದಲ್ಲಿ ವಿಷಯ ಮಂಡಿಸಿ ಪ್ರಥಮ ಸ್ಥಾನದೊಂದಿಗೆ 5, 000 ರೂ. ನಗದು ಮತ್ತು ಪ್ರಶಸ್ತಿ ಪತ್ರ ವಿಜೇತನಾಗಿದ್ದಾನೆ.
ಉತ್ತರಾದಿ ಮಠದ ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯ ಮತ್ತು ಭಾಗ್ಯಶ್ರೀ ಅವರ ಪುತ್ರನಾದ ಈತ ತಂದೆಯ ಬಳಿಯೇ ಸಂಸ್ಕೃತ ವೇದ, ಶಾಸ್ತ್ರ ಅಧ್ಯಯನ ಮಾಡುತ್ತಿದ್ದು ಮೈಸೂರಿಗೆ ಕೀರ್ತಿ ತಂದಿದ್ದಾನೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗದ 20 ಸಂಸ್ಕೃತ ಪಾಠಶಾಲೆ, ಗುರುಕುಲಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಸಂಸ್ಕೃತ ವಿವಿ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ 61ನೇ ಅಖಿಲ ಕರ್ನಾಟಕ ಸಂಸ್ಕೃತ ಶಾಸ್ತ್ರೀಯ ಭಾಷಣ ಸ್ಪರ್ಧೆಯ ಭಾರತೀಯ ಪುರಾತನ ವಿಜ್ಞಾನ (ರಸಾಯನ ಶಾಸ್ತ್ರ)ದ ಬಗ್ಗೆ ಸಂಸ್ಕೃತದಲ್ಲಿ ವಿಷಯ ಮಂಡಿಸಿ ಪ್ರಥಮ ಸ್ಥಾನ ಪಡೆದ ಮೈಸೂರಿನ ಪಿ. ಕೃಷ್ಣ ಅವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ನೃಪತುಂಗ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ಬಳ್ಳಿ, ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ. ಅಹಲ್ಯಾ, ಕುಲಸಚಿವೆ ಡಾ. ರೂಪಶ್ರೀ ಇತರರು ಹಾಜರಿದ್ದರು.
ನೃಪತುಂಗ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ಬಳ್ಳಿ, ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ. ಅಹಲ್ಯಾ, ಕುಲಸಚಿವೆ ಡಾ. ರೂಪಶ್ರೀ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು. ಕಳೆದ ವರ್ಷ ಆಯೋಜಿಸಿದ್ದ ಸಂಸ್ಕೃತ ಒಲಂಪಿಯಾಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ್ದ ಕೃಷ್ಣ, ರಾಷ್ಟ್ರ ಮಟ್ಟದಲ್ಲೂ ಪ್ರಥಮ ಬಹುಮಾನದೊಂದಿಗೆ ಪಾರಮ್ಯ ಮೆರೆದು ಕರ್ನಾಟಕಕ್ಕೆ ಕೀರ್ತಿ ತಂದಿದ್ದ. ಉದಯೋನ್ಮುಖ ಪ್ರತಿಭೆಗೆ ಉತ್ತರಾದಿ ಮಠಾಧೀಶರಾದ ಶ್ರೀಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.