Manohar Prasad: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ
Team Udayavani, Mar 1, 2024, 8:02 AM IST
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತದ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಇದನ್ನೂ ಓದಿ: Bangladesh: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ… 43 ಮಂದಿ ಮೃತ್ಯು, ಹಲವರಿಗೆ ಗಾಯ
ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.