Thirthahalli: ಕಿಮ್ಮನೆ ರತ್ನಾಕರ್ ಗೆ ಅಪಮಾನ: ರೈತ ಮಹಿಳೆ ವಿರುದ್ಧ ದೂರು ದಾಖಲು
Team Udayavani, Mar 1, 2024, 1:34 PM IST
ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್‌ಸ್ಟಕ್ಷನ್ ಸಂಸ್ಥೆ ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ.
ಈ ಕಾಮಗಾರಿಯನ್ನು ಇಲ್ಲಿನ ಸ್ಥಳೀಯ ಕೆಲವು ಸಂಘಟನೆಗಳು ವಿರೋಧಿಸುತ್ತಿವೆ.
ಈ ಸಂಬಂಧ ಫೆಬ್ರವರಿ 26ರಂದು ಹೆಗ್ಗೋಡು ಶಾಲಾ ಮುಂಭಾಗ ಪ್ರತಿಭಟನೆಗಳು ನಡೆದಿವೆ. ಈ ಸಂದರ್ಭ ಮಧ್ಯಾಹ್ನ 12-30 ರ ಸುಮಾರಿಗೆ ಮಾದ್ಯಮದವರೊಂದಿಗೆ ಮಾತನಾಡಿದ ಸ್ಥಳೀಯರಾದ ಶಾಂತಾ ಕೋಂ ಗಿರೀಶ ಎನ್ನುವವರು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್‌ರವರಿಗೆ ಹೀನಾಯವಾಗಿ ಬೈದು ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.
“ಕಿಮ್ಮನೆ ಎಲ್ಲಿ ಸತ್ತಿದ್ದಾನೆ, ಅವನು ಓಟು ಕೇಳಲು ಬರಲಿ, ಅವನಿಗೆ ಚಪ್ಪಲಿಯಿಂದ ಹೊಡೆಯಿರಿ” ಅಂತ ಅವಹೇಳನಾಕಾರಿಯಾಗಿ ನಿಂದಿಸಿ ಜನರನ್ನು ಎತ್ತಿಕಟ್ಟಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದ್ದಾರೆ. ಘಟನೆಗೆ ಸಂಬಂಧ ಕಿಮ್ಮನೆ ರತ್ನಾಕರ್‌ಗೆ ಅವಹೇಳನ ಮಾಡಿ ನಿಂದಿಸಿರುವ ವೀಡಿಯೋ ಕ್ಲಿಪ್‌ಗಳನ್ನು ಈ ದೂರು ಅರ್ಜಿಯ ಜೊತೆ ಲಗತ್ತಿಸಿ ಮಹಿಳೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗುಂಬೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: Watch Theft: 100ರೂ. ವಾಚು ಕದ್ದ ಆರೋಪ… ಬಾಲಕನ ಬೆನ್ನಿಗೆ ಉಗುಳಿ ಥಳಿಸಿದ ಮದರಸಾದ ಮೌಲ್ವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.