Shirva: ಎಂಎಸ್‌ಆರ್‌ಎಸ್ ಕಾಲೇಜು: ಪ್ರಾಂಶುಪಾಲರಿಗೆ ಬೀಳ್ಕೊಡುಗೆ
Team Udayavani, Mar 2, 2024, 9:59 AM IST
ಶಿರ್ವ: ಇಲ್ಲಿನ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ| ನಯನಾ ಎಂ. ಪಕ್ಕಳ ಅವರ ಬೀಳ್ಕೊಡುಗೆ ಸಮಾರಂಭವು ಫೆ. 28 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|ವೈ. ಭಾಸ್ಕರ್ ಶೆಟ್ಟಿ ಮಾತನಾಡಿ ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಡಾ|ನಯನ ಅವರ ಪಾತ್ರ ದೊಡ್ಡದು. ಅವರ ಸೇವಾವಧಿಯಲ್ಲಿ ಕಾಲೇಜಿಗೆ ನ್ಯಾಕ್ ಎ+ ಮಾನ್ಯತೆ ದೊರೆತಿರುವುದು ಅವರ ನಾಯಕತ್ವ ಗುಣಕ್ಕೆ ಕೈಗನ್ನಡಿ ಯಾಗಿದ್ದು, ಅವರು ಕಾಲೇಜಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ನೆಮ್ಮದಿಯ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ ನಿವೃತ್ತರ ಮುಂದಿನ ಜೀವನಕ್ಕೆ ಶುಭಾಶಯ ಕೋರಿದರು. ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ| ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು. ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ನಿವೃತ್ತರ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಉಪ-ಪ್ರಾಂಶುಪಾಲೆ ನಿಶಾ ಶೆಟ್ಟಿ, ನಿವೃತ್ತ ಕಚೇರಿ ಅಧೀಕ್ಷಕ ರಮಾನಂದ ಶೆಟ್ಟಿಗಾರ್, ಹಿಂದೂ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶಕೀಲ ಹೆಗ್ಡೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದ, ನಿವೃತ್ತ ಸಿಬಂದಿವರ್ಗ, ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ| ಮಿಥುನ್ ಚಕ್ರವರ್ತಿ ಸ್ವಾಗತಿಸಿದರು.ಡಾ|ಸೋನಾ.ಎಚ್.ಸಿ ನಿರೂಪಿಸಿ, ಹೇಮಲತಾ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.