Marathi Actress: ಮರಾಠಿ ನಟಿ ಕೇತಕಿ ಚಿತಾಲೆ ವಿರುದ್ಧ ಪ್ರಕರಣ ದಾಖಲು… ಏನಿದು ಪ್ರಕರಣ
Team Udayavani, Mar 2, 2024, 10:26 AM IST
ಮಹಾರಾಷ್ಟ್ರ: ಎಸ್‌ಸಿ-ಎಸ್‌ಟಿ (ದೌರ್ಜನ್ಯ ತಡೆ ಕಾಯ್ದೆ) ದುರುಪಯೋಗದ ಆರೋಪದ ಮೂಲಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಾಲೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಫೆಬ್ರವರಿ 25 ರಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿಯಲ್ಲಿ ನಡೆದ ‘ಬ್ರಾಹ್ಮಣ ಅಕ್ಯ ಪರಿಷತ್’ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾದ ಪ್ರಕರಣಗಳ ತನಿಖೆಗೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ:
ಈ ವೇಳೆ ಮಾಹಿತಿ ಹಕ್ಕು ಕಾಯ್ದೆಯಡಿ ಅಟ್ರಾಸಿಟಿ ಕಾಯ್ದೆಯಡಿ ಎಷ್ಟು ಪ್ರಕರಣಗಳು ದಾಖಲಾಗಿವೆ, ಅವುಗಳಲ್ಲಿ ಎಷ್ಟು ಸುಳ್ಳು ಎಂಬ ಮಾಹಿತಿ ಪಡೆಯಬೇಕು ಎಂದು ಹೇಳಿದ್ದರು. ಅಟ್ರಾಸಿಟಿ ಕಾಯ್ದೆಯಡಿ ಸುಳ್ಳು ಪ್ರಕರಣಗಳನ್ನು ದಾಖಲಿಸುವುದು ದಂಧೆಯಾಗಿ ಪರಿಣಮಿಸಿದೆ ಎಂದೂ ಅವರು ಹೇಳಿದ್ದಾರೆ.
ನಟಿ ಕಾರ್ಯಕ್ರಮದಲ್ಲಿ ಮಾತನಾಡಿದ ವಿಚಾರವಾಗಿ ಅಲ್ಲಿನ ಸ್ಥಳೀಯ ನಿವಾಸಿಯಾಗಿರುವ ಪ್ರೇಮನಾಥ್ ಎಂಬವರು ಪರ್ಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಟಿಯ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದುವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದಿದ್ದಾರೆ.
ನಟಿ ಬಂದನವಾಗಿರುವುದು ಇದು ಮೊದಲಲ್ಲ:
ಚಿತಾಳೆ ವಿರುದ್ಧ ಈ ರೀತಿ ಕ್ರಮ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ ಈ ಹಿಂದೆಯೂ ಸಾಮಾಜಿಕ ಮಾಧ್ಯಮದಲ್ಲಿ ಶರದ್ ಪವಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಕ್ಕಾಗಿ ಚಿತಾಲೆ 2022 ರಲ್ಲಿ ಬಂಧನಕ್ಕೊಳಗಾಗಿದ್ದರು ಆದರೆ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Rameshwaram Cafe; ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.