ವೃದ್ಧ ದಂಪತಿಗೆ ಹಲ್ಲೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Team Udayavani, Mar 3, 2024, 12:12 AM IST
ವಿಟ್ಲ: ಪುಣಚ ಗ್ರಾಮದ ಪರಿಯಾಲ್ತಡ್ಕ ಸಮೀಪದ ಮಣೆಲ ಚರ್ಚ್ ಧರ್ಮಗುರು ತಮ್ಮದೇ ಸಮುದಾಯದ ವೃದ್ಧ ದಂಪತಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಚರ್ಚ್ನ ಧರ್ಮಗುರು ಮತ್ತು ಇನ್ನೋರ್ವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಗುರು ವೃದ್ಧ ದಂಪತಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೇಲ ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಪಾದ್ರಿ ನೆಲ್ಸನ್ ಒಲಿವೆರಾ ಹಲ್ಲೆ ಆರೋಪಿ ಎನ್ನಲಾಗಿದೆ.
ಹಲ್ಲೆ ಬಗ್ಗೆ ಸಂತ್ರಸ್ತ ವೃದ್ಧ ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ (79) ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಫೆ.29ರಂದು ಈ ಘಟನೆ ನಡೆದಿದೆ. ಪಾದ್ರಿ ನೆಲ್ಸನ್ ಒಲಿವೆರಾ ಮನೆಗೆ ತೆರಳಿದ ವೇಳೆ ಮನೆಯ ಹೊರಗೆ ವೃದ್ಧ ದಂಪತಿ ಜೊತೆ ವಾಗ್ವಾದ ನಡೆಸಿದ ಬಳಿಕ ಹಲ್ಲೆ ನಡೆಸುತ್ತಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.
ಪಾದ್ರಿಯು ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಪಟ್ಟಿ ಹಿಡಿದು ಎಳೆದೊಯ್ದು ತೀವ್ರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪತಿಯ ರಕ್ಷಣೆಗೆ ಮಹಿಳೆ ಮುಂದಾಗಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.