Department of Health: “ತೆರೆದಿಟ್ಟ ತಿಂಡಿ, ಕತ್ತರಿಸಿದ ಹಣ್ಣು ತಿನ್ನಬೇಡಿ’ʼ
Team Udayavani, Mar 3, 2024, 11:24 AM IST
ಬೆಂಗಳೂರು: ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ತಾರಕಕ್ಕೇರುತ್ತಿದ್ದು ವಿವಿಧ ಜಿಲ್ಲೆಯಲ್ಲಿ ಜ್ವರ, ತಲೆ ನೋವು, ಕಣ್ಣಿನ ಸಮಸ್ಯೆ ಸೇರಿ ಇತರ ಅನಾರೋಗ್ಯದಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ.
ಫೆಬ್ರವರಿ ತಿಂಗಳ ಮಧ್ಯ ಭಾಗದಿಂದ ಉಷ್ಣಾಂಶದಲ್ಲಿ ಏರಿಕೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕನಿಷ್ಠ 31ರಿಂದ ಗರಿಷ್ಠ 37ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗುತ್ತಿದೆ. ಕರಳುಬೇನೆ, ನಿರ್ಜಲೀಕರಣ, ವಾಂತಿ-ಭೇದಿ, ಕಣ್ಣಿನ ಉರಿ, ಚಿಕನ್ ಫಾಕ್ಸ್, ಟೈಫಾಯ್ಡ್, ಬಿಸಿಲಿನಿಂದ ತಲೆ ಸುತ್ತು, ಮೈಗ್ರೇನ್, ಸನ್ ಸ್ಟ್ರೋಕ್, ಮೂಗಿನಲ್ಲಿ ರಕ್ತ ಸುರಿಯುವುದು,ಅತಿಯಾದ ಸೂರ್ಯ ಕಿರಣಗಳಿಂದ ಚರ್ಮ ಸಮಸ್ಯೆಗಳು ಜನಸಾಮಾನ್ಯರನ್ನು ಹೆಚ್ಚಾಗಿ ಕಾಡುತ್ತಿವೆ. ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿರು ವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಹೆಚ್ಚಿನ ನೀರಿನ ಅಂಶದ ಆಹಾರ ಸೇವನೆ, ಕುದಿಸಿ ಆರಿಸಿದ ನೀರು ಸೇವಿಸಬೇಕು, ಬಿಸಿಯಾದ ಊಟ, ಶುದ್ಧವಾದ ಆಹಾರ ಸೇವನೆ, ಮಲ ವಿಸರ್ಜನೆಗೆ ಶೌಚಗೃಹ ಬಳಸಬೇಕು, ತೆರೆದಿಟ್ಟ ತಿಂಡಿ ಹಾಗೂ ಕತ್ತರಿಸಿ ಇಟ್ಟಿರುವ ಹಣ್ಣುಗಳನ್ನು ತಿನ್ನಬಾರದು, ಕೈ ಸ್ವತ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಬೆವರು ರೂಪದಲ್ಲಿ ದೇಹದ ನೀರು ಹೊರ ಹೋಗು ವುದರಿಂದ ದೇಹದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ದೇಹ ನಿರ್ಜಲೀಕರಣಗೊಳ್ಳುವುದರಿಂದ ಹಲವು ಸಮಸ್ಯೆ ಸೃಷ್ಟಿಯಾಗುತ್ತದೆ. ಹೀಗಾಗಿ ನೀರಿನ ಜತೆಗೆ, ದೇಹಕ್ಕೆ ಶಕ್ತಿ, ಚೈತನ್ಯ ತುಂಬುವಂತಹ ಹಣ್ಣಿನ ರಸ, ಪಾನೀಯ ಸೇವನೆ ಮೂಲಕ ನೀರಿನ ಅಂಶ ಹೆಚ್ಚಿಸಿ ಕೊಳ್ಳಬೇಕು. ಕಾಟನ್ ಉಡುಪು, ಬಿಸಿಲಿಗೆ ಹೋಗುವಾಗ ತಂಪು ಕನ್ನಡಕ, ಛತ್ರಿ ಬಳಕೆ ಸೇರಿ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮ ಪಾಲಿಸುವಂತೆ ಸೂಚಿಸಿದೆ.
ಎಚ್ಚರಿಕೆ ಸಲಹೆಗಳು :
- ಮಧ್ಯಾಹ್ನ 12ರಿಂದ 3ರ ವರೆಗೆ ಹೊರಹೋಗುವುದನ್ನು ತಪ್ಪಿಸಬೇಕು
- ಮಧ್ಯಾಹ್ನ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು
- ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸ ತಪ್ಪಿಸಿ
- ಮದ್ಯಪಾನ, ಕಾರ್ಬೋನೇಟೆಡ್ ಪಾನೀಯಗಳು, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ
- ಹೆಚ್ಚು ಪ್ರೊಟೀನ್ ಭರಿತ , ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ
- ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲು ಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ
ಹೆಚ್ಚು ಅಪಾಯವಿರುವ ಗುಂಪು :
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
ಗರ್ಭಿಣಿಯರು
ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
ಆರೋಗ್ಯ ಸಮಸ್ಯೆಗಳಿರುವವರು,
ರಕ್ತದ ಒತ್ತಡದಿಂದ ಬಳಲುತ್ತಿರುವವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.