Rameshwaram Cafe Case:ದೇಶದ ಹಿತರಕ್ಷಣೆ ಬಂದಾಗ ಪಕ್ಷ ಮುಖ್ಯ ಅಲ್ಲ: ಎಂ.ಬಿ.ಪಾಟೀಲ್
ಶರಣಪ್ರಕಾಶ ಹೇಳಿಕೆ ಗಮನಿಸಿಲ್ಲ, ತನಿಖೆ ಹಂತದಲ್ಲಿ ಪ್ರತಿಕ್ರಿಯೆ ನೀಡಲ್ಲ
Team Udayavani, Mar 3, 2024, 6:53 PM IST
ವಿಜಯಪುರ:ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಅತ್ಯಂತ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು ತನಿಖೆ ಹಂತದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಾದ ಕ್ರಮವಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಉದ್ದೇಶಪೂರಿತ ಘಟನೆ ಎಂದು ಸಚಿವ ಶರಣಪ್ರಕಾಶ ಪಾಟೀಲ ಹೇಳಿಕೆ ನೀಡಿರುವುದನ್ನು ಕೇಳಿಲ್ಲ. ಆ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಯಾರು ಕೃತ್ಯ ಎಸಗಿದ್ದಾರೆ, ಏಕೆ ಎಸಗಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕಾಗಿ ತನಿಖೆ ನಡೆಯುತ್ತಿದೆ.
ಸ್ಫೋಟ ಕೃತ್ಯ ಉಗ್ರರಿಂದ ಆಗಿರುವುದೋ, ಬೇರೆ ಯಾರಾದರೂ ಎಸಗಿದ್ದಾರೋ ಎಂಬುದು ತನಿಖೆಯಿಂದ ಹೊರ ಬರಲಿದೆ. ಸ್ಫೋಟ ಕೃತ್ಯ ಎಸಗಿದವರಿಗೆ ಶಿಕ್ಷೆ ಆಗಲೇಬೇಕು. ಇದರ ಹಿಂದಿರುವ ಎಲ್ಲ ಅಂಶಗಳನ್ನೂ ಪೂರ್ಣವಾಗಿ ತನಿಖೆಯಿಂದ ಹೊರ ತೆಗೆಯಬೇಕಿದೆ. ದೇಶದ ಹಿತರಕ್ಷಣೆ ಬಂದಾಗ ಪಕ್ಷ ಮುಖ್ಯವಾಗುವುದಿಲ್ಲ. ಬದಲಾಗಿ ದೇಶ ಹಾಗೂ ಜನರ ರಕ್ಷಣೆಯೇ ಮುಖ್ಯವಾಗಲಿದೆ. ರಾಷ್ಟ್ರೀಯ ಹಿತಾಸಕ್ತಿಯಿಂದ ಕೆಲಸ ಮಾಡುತ್ತೇವೆ. ಇಂಥ ವಿಷಯದಲ್ಲಿ ರಾಜಕೀಯ ಬೆರೆಸುವ ಕೆಲಸ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.