BJP ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಯಾನ: ರಾಜ್ಯದಲ್ಲಿ 3 ಲಕ್ಷ ಮಂದಿಯನ್ನು ತಲುಪುವ ಗುರಿ

ಲೋಕ ಚುನಾವಣೆ ಪ್ರಣಾಳಿಕೆಗೆ ಜನರಿಂದಲೇ ಅಭಿಪ್ರಾಯ ಸಂಗ್ರಹ

Team Udayavani, Mar 4, 2024, 12:01 AM IST

BJP ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಯಾನ: ರಾಜ್ಯದಲ್ಲಿ 3 ಲಕ್ಷ ಮಂದಿಯನ್ನು ತಲುಪುವ ಗುರಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನರ ಸಲಹೆ ಮೇರೆಗೆ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿರುವ ಬಿಜೆಪಿ, “ವಿಕಸಿತ ಭಾರತ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿದೆ.

ದೇಶಾದ್ಯಂತ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಹೊಂದಿರುವ ಬಿಜೆಪಿಯು, ರಾಜ್ಯದಲ್ಲಿ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಗಳನ್ನು ಸಂಗ್ರಹಿಸುವ ಸಂಕಲ್ಪ ಮಾಡಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಂದಿನ ಲೋಕಸಭಾ ಚುನಾವಣೆಯ ಕ್ಷಣಗಣನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸ ಲಾಗುತ್ತಿದೆ ಎಂದರು.

ಬಿಜೆಪಿಯ ಕೇಂದ್ರ ಸರಕಾರವು 2014 ಮತ್ತು 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷಗಳ ಮೋದಿ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜತೆಗೆ ಉದ್ಘಾಟನೆ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದು ವಿವರಿಸಿದರು.

ಈ ಬಾರಿ ಘೋಷಣೆ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು. ಸ್ವಾತಂತ್ರೊÂàತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರ ಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸಹಿತ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸ ಲಿದ್ದೇವೆ ಎಂದು ವಿಜಯೇಂದ್ರ ಹೇಳಿದರು.

ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರಿಂದ ಮೊದಲ ಪತ್ರ
ವಿಕಸಿತ ಹೆಸರಿನ ಪೆಟ್ಟಿಗೆಯೊಳಗೆ ಮೊದಲ ಸಂಕಲ್ಪ ಪತ್ರವನ್ನು ಕ್ರಿಕೆಟ್‌ ತಾರೆ ವೆಂಕಟೇಶ್‌ ಪ್ರಸಾದ್‌ ಅವರು ಹಾಕುವ ಮೂಲಕ ಚಾಲನೆ ನೀಡಲಾಯಿತು. ಅಭಿಯಾನದ ಸಹ ಸಂಚಾಲಕಿ ಮಾಳಿವಿಕಾ ಅವಿನಾಶ್‌ ಮಾತನಾಡಿ, ಸಂಕಲ್ಪ ಪತ್ರಕ್ಕೆ ಡಿಜಿಟಲ್‌ ಮೀಡಿಯ ಮೂಲಕ ಅಥವಾ ನಮೋ ಆ್ಯಪ್‌ ಮೂಲಕ ದಾಖಲಿಸಲು ಅವಕಾಶವಿದೆ. ಇದನ್ನು ಬಳಸಿಕೊಳ್ಳಿ ಎಂದು ವಿನಂತಿಸಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಚುನಾವಣೆ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್‌ ಅಗರವಾಲ್‌, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಸಾಹಿತಿ- ಐಎಎಸ್‌ ಅಧಿ ಕಾರಿ, ಅಭಿಯಾನದ ಸಹ ಸಂಚಾಲಕ ಸಿ.ಆರ್‌.ಸೋಮಶೇಖರ್‌, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್‌ ಉಪಸ್ಥಿತರಿದ್ದರು.

ಏನಿದು ವಿಕಸಿತ ಭಾರತ- ಸಂಕಲ್ಪ ಪತ್ರ?
ಮಾ.3ರಂದು ಆರಂಭಗೊಂಡಿರುವ ಸಂಕಲ್ಪ ಪತ್ರ ಅಭಿಯಾನವು ಮಾ.15ರ ವರೆಗೆ ನಡೆಯಲಿದ್ದು, ರಾಜ್ಯಾದ್ಯಂತ ಸಲಹಾ ಪೆಟ್ಟಿಗೆಗಳನ್ನು ಕೊಂಡೊಯ್ಯಲಾಗುತ್ತದೆ. ವಿಕಸಿತ ಭಾರತ- ಇದು ಮೋದಿ ಗ್ಯಾರಂಟಿ ಎನ್ನುವ ವಿಷಯದ ಕುರಿತು ರಾಜ್ಯಾದ್ಯಂತ ವೀಡಿಯೋ ವ್ಯಾನ್‌ ಕೂಡ ಸಂಚರಿಸಲಿದ್ದು, 10 ವರ್ಷಗಳ ಸಾಧನೆಯನ್ನೂ ವೀಡಿಯೋ ಮೂಲಕ ಬಿತ್ತರಿಸಲಾಗುತ್ತದೆ. ಮುಂದಿನ 5 ವರ್ಷಗಳ ವಿಕಸಿತ ಭಾರತ ಕಟ್ಟುವ ಕನಸಿಗೆ ಪೂರಕವಾಗಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಬರೆದು ಪೆಟ್ಟಿಗೆಯಲ್ಲಿ ಹಾಕಬಹುದು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ. ಇದಲ್ಲದೆ, 909090-2124 ಸಂಖ್ಯೆಗೆ ಮಿಸ್ ಕಾಲ್‌ ನೀಡುವ ಮೂಲಕವೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬಹುದು. ಸಲಹಾ ಪೆಟ್ಟಿಗೆ ಮೇಲಿನ ಕ್ಯು ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕವೂ ಸಲಹೆಗಳನ್ನು ನೀಡಬಹುದು ಎಂದು ಬಿಜೆಪಿ ತಿಳಿಸಿದೆ.

ಭಾರತ ವಿಶ್ವಗುರುವಾ ಗುವುದು ಎಲ್ಲರ ಬಯಕೆ. ಇದಕ್ಕಾಗಿ ಪ್ರತಿ ಪ್ರಜೆಯ ಸಂಕಲ್ಪವನ್ನು ದಾಖಲಿಸಲು ಈ ಅಭಿಯಾನ ಮಾಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿ, ಪೊಲೀಸ್‌ ಕಾನ್‌ಸ್ಟೆಬಲ್‌, ಎಂಜಿನಿಯರ್‌, ಕ್ರೀಡಾಪಟು ಸಹಿತ ಪ್ರತಿಯೊಬ್ಬರ ಭಾವನೆಗೂ ಅವಕಾಶವಿದೆ. ಶಿಕ್ಷಣ, ಕ್ರೀಡೆ, ಧಾರ್ಮಿಕ ಭಾವನೆಗಳ ರಕ್ಷಣೆ ಸಹಿತ ಎಲ್ಲ ಕ್ಷೇತ್ರಗಳ ಭಾವನೆಗಳ ಸಂಗ್ರಹ ನಡೆಯಲಿದೆ.
-ಆರ್‌.ಅಶೋಕ,
ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.